ಮೈಸೂರು:25 ಮಾರ್ಚ್ 2022
ನಂದಿನಿ ಮೈಸೂರು
ರಾಜವಂಶಸ್ಥರಾದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹುಟ್ಟು ಹಬ್ಬ ಹಿನ್ನೆಲೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ಮೋಹನ್ ದಾಸ್ ತುಳಸಿದಾಸ್ ಹೆರಿಗೆ ಆಸ್ಪತ್ರೆ ಆವರಣದಲ್ಲಿ ಅನ್ವೇಷಣ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ವಡೆಯರ್ ರವರ ಹುಟ್ಟುಹಬ್ಬದ ಅಂಗವಾಗಿ ಕೋವಿಡ್ ಸಮಯದಲ್ಲಿ ಸೇವೆ ಸಲ್ಲಿಸಿದ ಸುಮಾರು 9 ಜನ ಆಂಬುಲೆನ್ಸ್ ವಾಹನ ಚಾಲಕರಿಗೆ ಹಾಗೂ ವೈದರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಅನ್ವೇಷಣೆ ಟ್ರಸ್ಟ್ ನ ಸಂಸ್ಥಾಪಕ ಅಮರ್ನಾಥ್, ಡಾ. ಎಂ ಜಿ ಆರ್ ಅರಸ್,ಲಿಂಗರಾಜ್ ಅರಸ್, ಭಾಸ್ಕರ್, ಹರೀಶ್ ಅರಸ್, ಶಂಕರ್ ಮುಂತಾದವರು ಉಪಸ್ಥಿತರಿದ್ದರು.