ಸರಗೂರು: 31 ಜನವರಿ 2022
ಕುಷ್ಠರೋಗದ ಬಗ್ಗೆ ಕೀಳರಿಮೆ ಬಿಟ್ಟು ಸರಿಯಾದ ಚಿಕಿತ್ಸೆ ಪಡೆಯಿರಿ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಾಣಧಿಕಾರಗಳಾದ ಡಾ.ಮಂಜು ಪ್ರಾಸದ್ ಅವರು ಹೇಳಿದರು.
ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನಲ್ಲಿರುವ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ಕಛೇರಿಯಲ್ಲಿ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕುಷ್ಠರೋಗವು ಯಾವುದೇ ಕಾರಣಕ್ಕೂ ವಂಶಪರಂಪರೆಯಾಗಿ ಬರುವುದಿಲ್ಲ. ಕುಷ್ಠರೋಗದ ಬಗ್ಗೆ ಇರುವ ಮೂಢನಂಬಿಕೆಯನ್ನು ಬಿಟ್ಟು, ನಿರಂತರವಾಗಿ 6 ತಿಂಗಳುಗಳ ಕಾಲ ಚಿಕಿತ್ಸೆ ಪಡೆದುಕೊಳ್ಳಿ. ಇದರಿಂದ ಸಂಪೂರ್ಣವಾಗಿ ಕುಷ್ಠರೋಗವನ್ನು ನಿಯಂತ್ರಿಸಬಹುದು ಎಂದರು.
ಸರ್ಕಾರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಷ್ಠರೋಗದ ಬಗ್ಗೆ ಹಲವಾರು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಹಾಗೂ ಚರ್ಮರೋಗ ತಜ್ಞರು ಮತ್ತು ಆಶಾಕಾರ್ಯಕರ್ತೆಯರ ಸಹಕಾರದಿಂದ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.
ಕುಷ್ಠರೋಗ ನಿಯಂತ್ರಾಣಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು.ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 43 ಕುಷ್ಠರೋಗ ಪ್ರಕರಣಗಳಿದ್ದು, ಹೆಚ್ ಡಿ ಕೋಟೆ ತಾಲೂಕಿನಲ್ಲಿ 4 ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.
ವಿವಿಧ ಗ್ರಾಮಗಳಿಂದ ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಕುಷ್ಠರೋಗವನ್ನು ನಿರ್ಮೂಲನೆ ಮಾಡಲು ಸರ್ಕಾರದ ಯೋಜನೆಗಳ ಕುರಿತು ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ನೇರ ಫೋನ್ ಇನ್ ಕಾರ್ಯಕ್ರಮವನ್ನು ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ವ್ಯವಸ್ಥಾಪಕ ನಿಂಗರಾಜು ಅವರು ನಡೆಸಿಕೊಟ್ಟರು.
ಇದೇ ವೇಳೆ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ಸಿಬ್ಬಂದಿಗಳಾದ ಶಿವಲಿಂಗ್ ಹ್ಯಾಂಡ್ ಪೋಸ್ಟ್, ಶ್ರೀಕಾಂತ್ ಸರಗೂರು, ಸೋಮೇಶ್ ಹಾಗೂ ಇನ್ನಿತರರು ಇದ್ದರು.
ಸಂಜಯ್ ಕೆ ಬೆಳತೂರು ಜೊತೆ ನಂದಿನಿ ಭಾರತ್ ನ್ಯೂಸ್ ಟಿವಿ ಮೈಸೂರು