ನಂದಿನಿ ಮೈಸೂರು
ಕಳೆದ ಐದು ವರ್ಷಗಳ ಅವಧಿಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರವನ್ನು ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಿದ ತೃಪಿಯಿದೆ: ಎಲ್.ನಾಗೇಂದ್ರ
ಮೈಸೂರು: ಕಳೆದ ಐದು ವರ್ಷಗಳ ಅವಧಿಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರವನ್ನು ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಿದ ತೃಪ್ತಿಯೊಂದಿಗೆ ಖುಷಿಯೂ ಇದೆ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಎಲ್.ನಾಗೇಂದ್ರ ಹೇಳಿದರು.
ಗುರುವಾರ ನಗರದ ಚಾಮರಾಜಪುರಂನಲ್ಲಿರುವ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ 950 ಕೋಟಿರೂಗಳ ಅನುದಾನವನ್ನು ಸರ್ಕಾರದಿಂದ ತಂದು ಸಮಗ್ರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಕ್ಷೇತ್ರದ ಜನರು ಎದುರಿಸುತ್ತಿದ್ದ ಹಲವಾರು ಸಮಸ್ಯೆಗಳನ್ನು ಪರಿಹರಿಸಿದ್ದೇನೆ. ನನ್ನ ಅಭಿವೃದ್ಧಿ ಕೆಲಸಗಳನ್ನು ನೋಡಿರುವ ಕ್ಷೇತ್ರದ ಜನರು ನನ್ನ ಕೆಲಸಕ್ಕೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ, ನಿಮಗೆ ಈ ಬಾರಿ ಕೂಡ ಮತ ನೀಡುವುದಾಗಿ ಖುಷಿಯಿಂದ ಹೇಳುತ್ತಿದ್ದಾರೆ ಎಂದರು.
ಕಳೆದ ಐದು ವರ್ಷದಿಂದ ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಕೆ, ಒಳಚರಂಡಿ ವ್ಯವಸ್ಥೆ, ರಸ್ತೆಗಳ ನಿರ್ಮಾಣ ಸೇರಿದಂತೆ ಎಲ್ಲಾ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ. ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಮಾತ್ರವಲ್ಲ, ಕ್ಷೇತ್ರದ ಜನರಿಗೂ ಸಮಾಧಾನವಿದೆ ಎಂದರು.
ಯಡಿಯೂರಪ್ಪ ಸಿಎಂ ಆಗಿದ್ದಾಗ ಶಾಸಕನಾಗಿ ಕೆಲಸ ಮಾಡಬೇಕೆಂಬ ಆಸೆಯಿತ್ತು. 14 ತಿಂಗಳ ಕಾಲ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಮಾಡಲು ಆಗಲಿಲ್ಲ. ಅದಾದ ನಂತರ ಬಂದ ಕೋವಿಡ್ ನಿಂದಾಗಿ ಅಭಿವೃದ್ಧಿ ಮಾಡಲು ಆಗಲಿಲ್ಲ. ಈ ವೇಳೆ ಬೆಡ್ ವ್ಯವಸ್ಥೆ, ಆಸ್ಪತ್ರೆಗೆ ದಾಖಲು ಹಾಗೂ ಕಿಟ್ ಕೊಡುವ ಕೆಲಸ ಮಾಡಲಾಯಿತು. 50 ಸಾವಿರ ಆಹಾರ ಕಿಟ್ ಕೊಡಲಾಯಿತು.2 ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ರಸ್ತೆ ಅಭಿವೃದ್ಧಿ ಮಾಡಿದ್ದೇವೆ. ಕುಡಿಯುವ ನೀರಿನ ವ್ಯವಸ್ಥೆ 330 ಕೋಟಿ ರೂ. ವೆಚ್ಚದಲ್ಲಿ ಆರು ಟ್ಯಾಂಕ್ ಮಾಡಿದ್ದೇವೆ. ಒಳಚರಂಡಿ ನಿರ್ಮಾಣ ಮಾಡಿಕೊಟ್ಟಿದ್ದೇವೆ. ನಾಲ್ಕು ಜಿಲ್ಲೆಯಿಂದ ಬರುವ ರೋಗಿಗಳಿಗೆ ನೂರು ಶತಮಾನ ಅನುಭವಿಸುತ್ತಿರುವ ಕೆ.ಆರ್.ಆಸ್ಪತ್ರೆ ಯಾರು ಸಹ ಅನುದಾನ ಕೊಟ್ಟಿರಲಿಲ್ಲ. 90 ಕೋಟಿ ರೂ. ನೀಡಿದ್ದಾರೆ. ರಾಜ್ಯದ ಮೊದಲ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಲಯದ ದುರಸ್ಥಿಗೆ 42 ಕೋಟಿ ರೂ. ನೀಡಲಾಗಿದೆ. ಗ್ರಂಥಾಲಯಕ್ಕೂ 32 ಕೋಟಿ, 120 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ವಿದ್ಯಾರ್ಥಿಗಳಿಗೆ ಸೌಲಭ್ಯ, ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ 46 ಕೋಟಿ ನೀಡಿದ್ದೇವೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಹೆಸರಿನಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 1 ಸಾವಿರ ವಿದ್ಯಾರ್ಥಿಗಳಿಗೆಂದು ವಿದ್ಯಾರ್ಥಿ ನಿಲಯ ನಿರ್ಮಿಸಿದ್ದೇವೆ. ಕೆ.ಆರ್. ಮಾರುಕಟ್ಟೆ ಕೆಡವಿ ಹೊಸದಾಗಿ ನಿರ್ಮಿಸಬೇಕೆಂಬ ಆಸೆಯಿತ್ತು.140 ಕೋಟಿ ನೀಡಲು ಸಿದ್ದವಿದ್ದೇವು. 300 ಕೋಟಿ ಗೂ ಹೆಚ್ಚಿನ ಅಭಿವೃದ್ಧಿ, 15 ಕೋಟಿ ಒಳಚರಂಡಿ ಕ್ಷೇತ್ರದ ಸಮಸ್ಯೆ ಬಗೆಹರಿಸಿದ್ದೇವೆ.
ಇತ್ತೀಚಿನ ದಿನಗಳಲ್ಲಿ ಪಡುವಾರಹಳ್ಳಿಯಲ್ಲಿರುವ 43 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಗೊAಡಿದೆ. ಕನ್ನೇಗೌಡ, ಒಂಟಿಕೊಪ್ಪಲು, ಮೇಟಗಳ್ಳಿ ಯಲ್ಲಿ ಒಂದು ರಸ್ತೆಯನ್ನು ಬಿಡದೇ ಅಭಿವೃದ್ಧಿ ಮಾಡಿದ್ದೇವೆ. ತಿಲಕ್ ನಗರದ ಪ್ರದೇಶದಲ್ಲಿಯೂ ಮೂಲಭೂತ ಸೌಕರ್ಯ ಕಲ್ಪಿಸಿದ್ದೇವೆ ಎಂದರು.
ತಿಲಕನಗರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದೇನೆ. ಬಹಳ ನೆನಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ
16.5 ಕೋಟಿ ರೂಗಳಿಗೆ ಮಂಜೂರಾತಿಯನ್ನು ನೀಡಿದ್ದಾರೆ. ಚುನಾವಣೆ ಮುಗಿದ ಬಳಿಕ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸಹ ವಕ್ತಾರರಾದ ಡಾ.ಕೆ.ವಸಂತ್‌ಕುಮಾರ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೇ ಶ್ರೀನಿವಾಸಗೌಡ, ಬಿಜೆಪಿ ಮಾಧ್ಯಮ ಕೇಂದ್ರದ ಸಂಯೋಜಕ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.