ಅರಣ್ಯ ಇಲಾಖೆ ನಿರ್ಲಕ್ಷ್ಯೆ ಚಿರತೆ ದಾಳಿಗೆ ಉಸಿರು ಚೆಲ್ಲಿದ ಕಾಲೇಜಿನ ಯುವತಿ,ಕುಟುಂಬಸ್ಥ ಆಕ್ರಂದನ, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ

ನಂದಿನಿ ಮೈಸೂರು

ತಿ.ನರಸೀಪುರ:ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿಯ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.

ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ (22) ಯುವತಿಯು ಚಿರತೆ ದಾಳಿಗೆ ತುತ್ತಾಗಿದ್ದು ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ
ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.

ಚಿರತೆ ಹಿಡಿಯುವಂತೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದರೂ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈಗ ಮತ್ತೊಂದು ಬಡ ಜೀವ ಜೀವ ಕಳೆದುಕೊಂಡಂತಾಗಿದೆ .

ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶದ ಪ್ರತಿಭಟನೆ

ಕಳೆದ ತಿಂಗಳಷ್ಟೇ ಚಿರತೆ ದಾಳಿಯಿಂದ ಯುವಕ ಸಾವನ್ನಪ್ಪಿದ್ದು ,ಈಗ ಯುವತಿಯ ಬಲಿ ಪಡೆದಿದೆ.ಚಿರತೆ ದಾಳಿಯಿಂದ ನಿರಂತರ ದಾಳಿ ನಡೆಯುತ್ತಿದ್ದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ವಿಫಲತೆ ಕಂಡಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು .

ಸ್ಥಳಕ್ಕೆ ಭೇಟಿ ನೀಡಿದ ಶಾಸಕರು,ದುರ್ಘಟನೆಗೆ ಸಂತಾಪ ಸೂಚಿಸಿದರು.ಸ್ಥಳದಲ್ಲೇ ಪ್ರತಿಭಟನಾ ನಿರತ ಜೊತೆ ಧರಣಿಗೆ ಕೂತ ಶಾಸಕರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು,ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಬೇಕು ಎಂದು ಪಟ್ಟುಹಿಡಿದರು .ಸ್ಥಳದಲ್ಲಿ ಡಿವೈಎಸ್ಪಿ ಗೋವಿಂದರಾಜು ,ಪಿಎಸ್ಐ ತಿರುಮಲ್ಲೇಶ್,ಡಾ .ಭಾರತಿ ,ಡಾ .ರೇವಣ್ಣ ಇತರರು ಹಾಜರಿದ್ದರು .

Leave a Reply

Your email address will not be published. Required fields are marked *