ನಂದಿನಿ ಮೈಸೂರು
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಿರತೆ ದಾಳಿಗೆ ಒಳಗಾದ ಕುಟುಂಬಗಳ ಭೇಟಿ ಮಾಡಿ, ಸಾಂತ್ವನ ಹೇಳಿದರು.
ಟಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಮೃತಪಟ್ಟ 11 ವರ್ಷದ ಬಾಲಕ ಜಯಂತ್ ನಿವಾಸ ಹಾಗೂ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಮೃತಪಟ್ಟ ಸಿದ್ದಮ್ಮ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಗ್ರಾಮಸ್ಥರ ಅಹವಾಲು ಆಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಶಾಸಕರಾದ ಎಂ.ಅಶ್ವಿನ್ ಕುಮಾರ್, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ಅನೇಕ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.