ನಂದಿನಿ ಮೈಸೂರು
*ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕನ ಪುತ್ರ ಲೋಕಾಯುಕ್ತ ಬಲೆಗೆ*
ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ.
ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟ ಪ್ರಶಾಂತ್, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.
ಶಾಸಕರ ಪುತ್ರ ಪ್ರಶಾಂತ್ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ. ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ.