ಮೈಸೂರು:4 ಫೆಬ್ರವರಿ 2022
ನಂದಿನಿ ಮೈಸೂರು
ಮಹದೇವಪುರದ ಎನೆಡ್ಸಾ ಹಿರಿಯ ಪ್ರಾರ್ಥಮಿಕ ಶಾಲೆೆೆ ಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಮೈಸೂರು ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಜಿಲ್ಲಾಧ್ಯಕ್ಷರಾದ ಜಿ.ಬಸವಣ್ಣನವರು ಈ ಕುರಿತು ಮಾತನಾಡಿ ಕರೋನಾ ಸಂಕಷ್ಟದ ಸಮಯದಲ್ಲಿ ಜನರು ಆಸ್ಪತ್ರೆಗೆ ಹೋಗಲು ಹಿಂದೇಟು ಹಾಕುತ್ತಿದ್ದು ಅನೇಕರಿಗೆ ರಕ್ತದ ಅಗತ್ಯವಿದೆ. ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ರಕ್ತದಾನ ಪೂರೈಕೆಗಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಯುವಸೇನೆಯ 52 ಸೇನಾನಿಗಳು ರಕ್ತದಾನವನ್ನು ಮಾಡಿದ್ದಾರೆ ಇದನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಜೀವಧಾರೆ ರಕ್ತನಿಧಿ ಕೇಂದ್ರದ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಸಹಕರಿಸಿದ್ದಾರೆ.ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಸಹಕರಿಸಿದ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆಯ ಎಲ್ಲ ಕಾರ್ಯಕರ್ತರಿಗೂ ಹಾಗೂ ಜೀವಧಾರೆ ರಕ್ತನಿಧಿ ಯವರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷರಾದ ಶಿವಶಂಕರ್ ಅವರು, ಮಂಜು ,ರವಿ ,ನಾಗೇಶ್, ನಿತಿನ್, ಚಂದ್ರಕಾಂತ್ ,ಅಭಿ ,ಆಕಾಶ್,ಮಂಜು ಪುನೀತ್,ರಮೇಶ್, ಹೇಮಂತ್,ಸಲ್ಮಾನ್ ರಫೀಕ್,ಕುಮಾರ್,ರವಿ ಇನ್ನೂ ಮುಂತಾದವರು ಹಾಜರಿದ್ದರು.