ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ,ಮಹಿಳಾ ವಿಚಾರಗೋಷ್ಠಿ

ಪಿರಿಯಾಪಟ್ಟಣ:20 ಡಿಸೆಂಬರ್ 2021

ನಂದಿನಿ

ಪಿರಿಯಾಪಟ್ಟಣ ತಾಲೂಕಿನ ಭೋಗನಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ ಹಾಗೂ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಮಾದೇಶ್ವರ ಜ್ಞಾನವಿಕಾಸ ಕೇಂದ್ರದ ಉದ್ಘಾಟನೆ ಮಾಡಿದ ಯೋಜನಾಧಿಕಾರಿ ಸಂತೋಷ್ ಕುಮಾರ್ ಮಾತನಾಡಿ ಜ್ಞಾನವಿಕಾಸ ಕಾರ್ಯಕ್ರಮ ಮಾವತಿ ಅಮ್ಮನವರ ಕನಸಿನ ಕೂಸು, ಇದನ್ನು ಉತ್ತಮ ರೀತಿಯಲ್ಲಿ ಯಶಸ್ವಿಯಾಗಿ ನಡೆಸಿ ಕೊಡುವುದಾಗಿ ತಿಳಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಕುಟುಂಬ ನಿರ್ವಹಣೆಗೆ ಅತಿ ಕಮ್ಮಿ ಬಡ್ಡಿದರದಲ್ಲಿ ಹಣ ಪಡೆದು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಮಹೇಶ್ ಕುಮಾರ್ ಮಾತನಾಡಿ ಪೂಜ್ಯರು ಮತ್ತು ಅಮ್ಮನವರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು ಮಹಿಳೆಯರು ಸಬಲೀಕರಣಕ್ಕೆ ಉತ್ತಮ ಬುನಾದಿಯನ್ನು ಹಾಕಿದ್ದಾರೆ. ಒಂದು ಕುಟುಂಬ ನಿರ್ವಹಣೆ ಮಾಡಲು ಮಹಿಳೆಯರ ಪಾತ್ರ ಪ್ರಮುಖವಾದದ್ದು. ಧರ್ಮಸ್ಥಳ ಸಂಘ ಹಲವು ಯೋಜನೆಗಳನ್ನು ರೂಪಿಸಿದೆ ಇದರಲ್ಲಿ ಸಾಲ ಪಡೆದು ಅಭಿವೃದ್ಧಿ ಸಹಕಾರ ವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಶಶಿಕುಮಾರ್, ವಲಯ ಮೇಲ್ವಿಚಾರಕರಾದ ಹೇಮಂತ್, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಮಮಿತಾ ಹಾಗೂ ಸಂಘದ ಎಲ್ಲಾ ಸದಸ್ಯರುಗಳು ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಭಾಗವಹಿಸಿದ್ದರು

Leave a Reply

Your email address will not be published. Required fields are marked *