ನಂದಿನಿ ಮೈಸೂರು
ನಾನು ಮಾಡಿರುವ ಅಭಿವೃದ್ಧಿ ಕೆಲಸವನ್ನ ಇಲ್ಲ ಅಂದಾಗ ಸುಮ್ಮನಿರೋಕಾಗುತ್ತಾ ಎಂದು ಮಂಡ್ಯ ಸಂಸದೆ ಸುಮಲತಾ ತಿಳಿಸಿದರು.
ಜನರು ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಮಾಡಲ್ಲ. ನಿಜ ಹೇಳಲು ಭಯ ಏಕೆ ?. ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರು ಜವಾಬ್ದಾರಿ ಅರಿಯಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ ಎಂದು ತಮ್ಮ ವಿರೋಧಿಗಳಿಗೆ ಟಾಂಗ್ ಕೊಟ್ಟರು.
ಮೈಸೂರು-ಬೆಂಗಳೂರು ಹೆದ್ದಾರಿ ಒಳ್ಳೆಯ ಪ್ರಾಜೆಕ್ಟ್. ಆದರೆ ಮಂಡ್ಯ ಜನರಿಗೆ ತೊಂದರೆ ಕೊಟ್ಟರೆ ನಾನು ಸುಮ್ಮನಿರಲ್ಲ. ಮಾದ್ಯಮಗಳಲ್ಲಿ ದಿನ ನಿತ್ಯ ಏನು ಬೇಕಾದ್ರೂ ಹೇಳಬಹುದು. ಆದರೆ ಜನರ ಬಳಿ ಹೋದರೆ ನಿಜವಾದ ಸಮಸ್ಯೆ ಗೊತ್ತಾಗುತ್ತೆ. ಶಿಂಷಾ ನದಿ ಬಳಿ ಹೆದ್ದಾರಿ ಸೇತುವೆ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದರು.
ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡೆ ಇಲ್ಲ ಅಂತ ಹೇಳಿದರೆ ನಾನು ಸುಮ್ಮನಿರಲ್ಲ ಎಂದು ಸಂಸದ ಪ್ರತಾಪ್ ಸಿಂಹಗೆ ಪರೋಕ್ಷ ಟಾಂಗ್ ಕೊಟ್ಟರು.
ನನ್ನ ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರೂ ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಅನ್ನೋ ಭಯ ಎಂದು ಸುಮಲತಾ ನುಡಿದರು.
ಉಕ್ರೇನ್ ನಲ್ಲಿ ಯುದ್ಧ ನಡೆಯುತ್ತಿದೆ. ಅಲ್ಲಿಂದ ಕರೆದುಕೊಂಡು ಬರುವುದು ಸುಲಭದ ಪರಿಸ್ಥಿತಿ ಆಗಿರಲಿಲ್ಲ. ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ. ಎಲ್ಲರನ್ನೂ ಕರೆದುಕೊಂಡು ಬಂದಿದ್ದು ಟ್ರಿಮೆಂಡಸ್ ಜಾಬ್ ಎಂದು ಕೇಂದ್ರ ಸರ್ಕಾರದ ಬಗ್ಗೆ ಗುಣಗಾನ ಮಾಡಿದರು.
ರಾಜಕೀಯ ಒತ್ತಡದಲ್ಲಿ ಸಿನಿಮಾರಂಗವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೂ ಒತ್ತಡದ ನಡುವೆಯೂ ಈ ವರ್ಷ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಚಿತ್ರರಂಗ ನನ್ನ ಕುಟುಂಬ ಇದ್ದಂತೆ. ಚಿತ್ರರಂಗ ನನಗೆ ಎಲ್ಲವನ್ನೂ ನೀಡಿದೆ. ಅಲ್ಲಿ ಉತ್ತಮ ನೆನಪುಗಳಿವೆ, ಯಾವತ್ತೂ ಅದನ್ನು ಮರೆಯುವುದಿಲ್ಲ ಎಂದು ಸುಮಲತಾ ಹೇಳಿದರು.