ಮಾ.೧೦ ಮತ್ತು ೧೧ರಂದು ಸರ್ಕಾರಿ ನೌಕರರ ಕ್ರೀಡಾಕೂಟ

ಮೈಸೂರು:5 ಮಾರ್ಚ್ 2022

ನಂದಿನಿ ಮೈಸೂರು

ಮಾ.೧೦ ಮತ್ತು ೧೧ರಂದು ಚಾಮುಂಡಿ ವಿಹಾರ ಮತ್ತು ನಗರ ವಿವಿಧ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ತಿಳಿಸಿದರು.

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಹಯೋಗದಲ್ಲಿ ಆಯೋಜಿಸಿರುವ ಕ್ರೀಡಾಕೂಟ ಆಯೋಜನೆಗೊಂಡಿದೆ. ಮಾ.೧೦ರಂದು ಬೆಳಿಗ್ಗೆ ೧೦ಕ್ಕೆ ಚಾಲನೆ ದೊರೆಯಲಿದ್ದು, ಮಾ.೧೧ರಂದು ಸಂಜೆ ೪ಕ್ಕೆ ಸಮಾರೋಪಗೊಳ್ಳಲಿದೆ. ೨೦೦೦ ಸಾವಿರಕ್ಕೂ ಹೆಚ್ಚು ನೌಕಕರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕ್ರೀಡೆಗಳು: ಹಾಕಿ, ಕುಸ್ತಿ, ಕಬ್ಬಡಿ, ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ಅಥ್ಲೆಟಿಕ್ಸ್, ಟೆನಿಕಾಯ್ಟ್, ವೇಯ್ಟ್‌ಲಿಫ್ಟಿಂಗ್, ಪವರ್ ಲಿಫ್ಟಿಂಗ್, ಬೆಸ್ಟ್ ಫಿಸಿಕ್ಸ್, ಚೆಸ್, ಥ್ರೋ ಬಾಲ್, ಈಜು, ಕೇರಂ, ಫುಟ್‌ಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಮತ್ತು ಕ್ರಿಕೆಟ್ ಪಂದ್ಯಾವಳಿಗಳು ಕ್ರೀಡಾಕೂಟದಲ್ಲಿ ಜರುಗಲಿವೆ.

ಸಾಂಸ್ಕೃತಿಕ ಸ್ಪರ್ಧೆಗಳು: ಸಾಂಸ್ಕೃತಿಕ ಸ್ಪರ್ಧೆ ವಿಭಾಗದಲ್ಲಿ (ಹಿಂದೂಸ್ತಾನಿ ಸಂಗೀತ (ಮೌಖಿಕ ಕ್ಲಾಸಿಕಲ್) ಲಘು ಶಾಸ್ತ್ರೀಯ ಸಂಗೀತ (ಮೌಖಿಕ ಕ್ಲಾಸಿಕಲ್), ಕರ್ನಾಟಕ ಶಾಸ್ತ್ರೀಯ ಸಂಗೀತ, ಕರ್ನಾಟಕ ಲಘು ಶಾಸ್ತ್ರೀಯ ಸಂಗೀತ, ಜಾನಪದ ಗೀತೆ, ನೃತ್ಯ, ವಾದ್ಯ ಸಂಗೀತ, ಸ್ಟ್ರಿಂಗ್ ವಾದ್ಯಗಳು, ಹಿಂದೂಸ್ಥಾನಿ (ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ), ವಿಂಡ್ ವಾದ್ಯಗಳು, (ಕರ್ನಾಟಕ ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ ಸಂಗೀತ), ಪರಿಕೇಷನ್ ವಾದ್ಯಗಳು (ಜನರಲ್), ಕರಕುಶಲ ವಸ್ತುಗಳ ಪ್ರದರ್ಶನ, ಕಿರುನಾಟಕ) ಸ್ಪರ್ಧೆಗಳು ನಡೆಯಲಿವೆ.

ಈ ಸ್ಪರ್ಧೆಗಳು ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ವಿಶ್ವವಿದ್ಯಾನಿಲಯದ ಕ್ರೀಡಾಂಗಣ, ಮಾನಸಗಂಗೋತ್ರಿಯ ಒಳಾಂಗಣ ಕ್ರೀಡಾಂಗಣ, ರೋಟರಿ ವೆಸ್ಟ್ ಮೈಸೂರು ಸ್ಥಳಗಳಲ್ಲಿ ನಡೆಯಲಿವೆ ಎಂದು ಮಾಹಿತಿ ನೀಡಿದರು.

ಕ್ರೀಡಾಕೂಟದಲ್ಲಿ ಜಿಲ್ಲೆಯ ಸರ್ಕಾರಿ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರುಗಳು ತಮ್ಮ ಕಚೇರಿಯ ಆಸಕ್ತ ಸರ್ಕಾರಿ ನೌಕರ ಕ್ರೀಡಾಪಟುಗಳನ್ನು ಕಡ್ಡಾಯವಾಗಿ ನಿಯೋಜಿಸಲು ಕೋರಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಮತ್ತು ಸ್ಪರ್ಧಿಸುವ ನೌಕರರ ಹಾಜರಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ಪ್ರಯಾಣ ಭತ್ಯೆ ಮತ್ತು ಪಂದ್ಯಾವಳಿಯ ಅವಧಿಗೆ ವಿಶೇಷ ಸಾಂಧರ್ಭಿಕ ರಜೆ ಸೌಲಭ್ಯ ಪಡೆಯಲು ಅರ್ಹರಾಗಿತ್ತಾರೆ ಎಂದರು.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಕ್ರೀಡಾಧಿಕಾರಿಗಳು, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೂಟದಡಿ ನೇಮಕಗೊಂಡ ನೌಕರರು, ದಿನಗೂಲಿ ನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು ಮತ್ತು ಇನ್ನಿತರ ನೌಕರರು ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಅವಕಾಶವಿರುವುದಿಲ್ಲ. ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಗಳಲ್ಲಿ ಸಮವಸ್ತ್ರ ವೃಂದಕ್ಕೆ ಅವಕಾಶವಿರಲಿದೆ ಎಂದು ಮಾಹಿತಿ ನೀಡಿದರು.

ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು. ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ಇನ್ನೂ  ಪ್ರಧಾನ ಕಾರ್ಯದರ್ಶಿ ರೇವಣ್ಣ ಮಾತನಾಡಿ  ಕ್ರೀಡಾಕೂಟದಲ್ಲಿ ಸ್ಪರ್ಧಿಸುವ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸರ್ಕಾರಿ ನೌಕರರು ತಮ್ಮ ಹೆಸರು ಗಳನ್ನು ಮಾ.೧೦ರಂದು ಬೆಳಿಗ್ಗೆ ೮.೩೦ರ ಒಳಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರವೇಶ ಪತ್ರದಲ್ಲಿ ಕೆಜಿಐಡಿ ಸಂಖ್ಯೆ, ಕ್ರೀಡಾಪಟುವಿನ ಹೆಸರು, ಇಲಾಖೆ ಹೆಸರು, ಪದನಾಮ, ಭಾವಚಿತ್ರ, ಟ್ರ್ಯಾಕ್ ಸೂಟ್ ಮತ್ತು ಟೀ-ಶರ್ಟ್ ಮತ್ತು ಶೂ ಅಳತೆ ಹಾಗೂ ಭಾಗವಹಿಸುವ ಕ್ರೀಡೆಗಳನ್ನು ವಿವರಗಳನ್ನು ಕಡ್ಡಾಯವಾಗಿ ನಮೂದಿ ಬೇಕಾಗಿದೆ.ಭಾಗವಹಿಸುವ ನೌಕರರೆಲ್ಲರಿಗೂ ವಸತಿ ಹಾಗೂ ಊಟದ ವ್ಯವಸ್ಥೆ ಇರಲಿದೆ. ಸಂಜೆ ವೇಳೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಮೈಳಸಲಿವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ದೂ.ಸಂ.೦೮೨೧-೨೫೬೪೧೭೯, ೦೮೨೧-೨೪೨೭೮೯೦, ಮೊ.ಸಂ.೯೮೪೫೭೬೭೦೦೪ ಸಂಪರ್ಕಿಸಬಹುದು ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಸಕ ಕೆ.ಸುರೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಮಾಲಂಗಿ ಸುರೇಶ್, ಖಜಾಂಚಿ ರಮೇಶ್, ಕ್ರೀಡಾ ಕಾರ್ಯದರ್ಶಿ ಗಣೇಶ್, ಗಿರೀಶ್, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ಅಕ್ಕಮ್ಮ, ಜಿಲ್ಲಾ ಕಾರ್ಯದರ್ಶಿ ರಘು, ಜಂಟಿ ಕಾರ್ಯದರ್ಶಿ ರೇವಣ್ಣ, ಸಂಘಟನಾ ಕಾರ್ಯದರ್ಶಿ ಅಶೋಕ್, ಪ್ರೀತಿ, ಕುಮಾರ್, ಪ್ರದೀಪ್, ಭಾಸ್ಕರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *