ನಂದಿನಿ ಮೈಸೂರು
ಕರ್ನಾಟಕ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಮೇ 10 ರಂದು ಮತದಾನ ನಡೆಯಲಿದೆ. ನಂತರ ವಿಧಾನ ಸಭಾ ಚುನಾವಣೆ 2023 ಫಲಿತಾಂಶ ಹೊರಬೀಳಲಿದೆ.
ದೆಹಲಿಯ ಕೇಂದ್ರ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಚುನಾವಣಾ ಪಟ್ಟಿ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದ 224 ಕ್ಷೇತ್ರದಲ್ಲಿ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.
ಏಪ್ರಿಲ್ 13 ಅಧಿಸೂಚನೆ ಪ್ರಕಟ
ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ
ಏಪ್ರಿಲ್ 21 ನಾಮಪತ್ರಗಳ ಪರಿಶೀಲನೆ
ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆ ದಿನ
ಮೇ 10 ಮತದಾನ
ಮೇ 13 ಫಲಿತಾಂಶ
ಒಟ್ಟು 58,282 ಮತಗಟ್ಟೆಗಳು,ಗ್ರಾಮೀಣ ಪ್ರದೇಶದಲ್ಲಿ 34,219 ಮತಗಟ್ಟೆಗಳು ,ನಗರ ಪ್ರದೇಶದಲ್ಲಿ 24,063 ಮತಗಟ್ಟೆಗಳು,12,000 ಸೂಕ್ಷ್ಮ ಪ್ರದೇಶದ ಮತಗಟ್ಟೆಗಳು,