ಮುದ್ದನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ಸಭೆ

ಸಾಲಿಗ್ರಾಮ:13 ನವೆಂಬರ್ 2021

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮುದ್ದನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2020-21 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಮಹೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಜಯಂತ್ ಕುಮಾರ್ ಮಾತನಾಡಿ ಸಂಘವು ಸರ್ವ ಸದಸ್ಯರ ಸಹಕಾರದೊಂದಿಗೆ ಈ ಸಾಲಿನಲ್ಲಿ ಐವತ್ತೊಂದು ಸಾವಿರ ನಿವ್ವಳ ಲಾಭಗಳಿಸಿದೆ. ಮತ್ತಷ್ಟು ಅಭಿವೃದ್ಧಿ ಕಾಣಲು ಸದಸ್ಯರುಗಳು ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡುವ ಮೂಲಕ ಸಂಘವು ಅಭಿವೃದ್ದಿಯಾಗಲು ಮತ್ತು ತಮ್ಮ ಕುಟುಂಬಗಳು ಆರ್ಥಿಕ ಅಭಿವೃದ್ಧಿ ಹೊಂದಲು ಕಾರಣರಾಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕರುಗಳಾದ ಗದ್ದಿ ಲಕ್ಕೇಗೌಡ. ಸಿ.ವಿ.ಕಾಳೇಗೌಡ.
ಎಂ.ಎಸ್.ಚನ್ನಬಸಪ್ಪ.ವೈದ್ಯ ಪ್ರದೀಪ್ .
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ತಿಮ್ಮೇಗೌಡ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಇತ್ತೀಚೆಗೆ ನಿಧನರಾದ ಚಲನಚಿತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಗೌರವ ನಮನ ಸಲ್ಲಿಸಲಾಯಿತು.

ಸಭೆಯಲ್ಲಿ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸುಮಂತ್ . ಸಂಘದ ಕಾರ್ಯದರ್ಶಿ ಬಾಲಮನೋಹರ ಹಾಗೂ ನಿರ್ದೇಶಕರುಗಳು. ಸದಸ್ಯರುಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Leave a Reply

Your email address will not be published. Required fields are marked *