ನಂದಿನಿ ಮೈಸೂರು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೂತನವಾಗಿ ಆಯ್ಕೆಯಾದ ಸಂಸದರು ಮತ್ತು ವಿಧಾನಪರಿಷತ್ ಸದಸ್ಯರುಗಳಿಗೆ ಅಭಿನಂದನೆ ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ
ವಿಧಾನಪರಿಷತ್ ಸದಸ್ಯ ಕೆ ವಿವೇಕಾನಂದ ಹಾಗೂ
ವೇದಿಕೆಯ ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ನೂತನ ವಿಧಾನಪರಿಷತ್ ಸದಸ್ಯ ವಿವೇಕಾನಂದರನ್ನ ಸನ್ಮಾನಿಸಲಾಯಿತು.
ಎಸ್ಎಸ್ ಎಲ್ ಸಿ, ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರು ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್,
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಉಪಾಧ್ಯಕ್ಷ ಶಿವಶಂಕರ್ ಮೂರ್ತಿ,ಜಿಲ್ಲಾ ಕಾರ್ಯದರ್ಶಿ ರೇವಣ್ಣ,ಉಮೇಶ್,ರಮೇಶ್ ಕುಮಾರ್,ವಿಶ್ವನಾಥ್,ಎಸ್.ಜೆ.ರಮೇಶ್,ಸುರೇಶ್ ಎಸ್.ಮಾಲಂಗಿ ಸೇರಿದಂತೆ ಹಲವರು ಭಾಗಿಯಾಗಿದ್ದರು.