ಮೋದಿ ಯುಗ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ

 

ಮೈಸೂರು:6 ಅಕ್ಟೋಬರ್ 2021

ನ@ದಿನಿ

                   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಸ್ ಎ ರಾಮದಾಸ್ ಅವರು ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಯುಗ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

                    ಇದೇ ಸಂದರ್ಭದಲ್ಲಿ ಕಳೆದ ೨೦ ದಿನಗಳಿಂದ ರಾಮದಾಸ್ ಮೋದಿ ಯುಗ್ ಉತ್ಸವದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡುವ ಕಿರು ಹೊತ್ತಿಗೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.

                     ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಶಾಸಕರಾದ ಎಸ್ ಎ ರಾಮದಾಸ್, ಸಾ. ರಾ. ಮಹೇಶ್ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *