ಮೈಸೂರು:27 ಆಗಸ್ಟ್ 2022
ನಂದಿನಿ ಮೈಸೂರು
ಚಿತ್ರದುರ್ಗದ ಮುರುಘ ಮಠದ ಶ್ರೀಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅಪ್ರಾಪ್ತ ಬಾಲಕಿಯರು ಆರೋಪಿಸಿ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.
ಮೈಸೂರಿನ ಒಡನಾಡಿ ಸಂಸ್ಥೆಗೆ ನೆನ್ನೇ ಆಗಮಿಸಿದ ಇಬ್ಬರು ಹೆಣ್ಣು ಮಕ್ಕಳು ಮುರುಘ ಶ್ರೀ ಸ್ವಾಮೀಜಿಗೆ ಹಣ್ಣು ತೆಗೆದುಕೊಂಡು ಹೋಗಿ ಕೊಡುವಂತೆ ಮಹಿಳಾ ವಾರ್ಡನ್ ಹೇಳುತ್ತಿದ್ದರು.
ಹಣ್ಣು ತೆಗೆದುಕೊಂಡು ಹೋದಾಗ ನಮಗೆ ಮತ್ತು ಬರುವಂತೆ ಮಾಡಿ ಸ್ವಾಮೀಜಿ ನಮ್ಮನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು.ನಮಗೆ ಅನ್ಯಾಯವಾಗಿದೆ ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದರು.
ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಈ ವಿಚಾರ ತಿಳಿಸಿದ್ದಾರೆ.
ಸಮಿತಿಯವರು ಈ ಬಗ್ಗೆ ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.ಸಮಿತಿಯ ರಕ್ಷಣಾಧಿಕಾರಿ ಅವರು ನೀಡಿರುವ ದೂರಿನ ಮೇರೆಗೆ ಮೈಸೂರಿನ ನಜರ್ ಬಾದ್ ಪೋಲಿಸ್ ಸ್ಟೇಷನ್ ನಲ್ಲಿ ಫೋಸ್ಕೊ ಕಾಯ್ದೆಯಡಿ ಮುರುಘ ಶ್ರೀ ಸ್ವಾಮೀಜಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.