7 ದಿನದ ಬಳಿಕ ಮುರಘಾಶ್ರೀ ಬಂಧನ,14 ದಿನ ಜೈಲುವಾಸ

ನಂದಿನಿ ಮೈಸೂರು

ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಬಂಧಿಸಲಾಗಿದೆ.

ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಿದ್ದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ. ಹಾಸ್ಟೆಲ್ ವಾರ್ಡನ್ ರಶ್ಮಿಯವರನ್ನು ವಿಚಾರಣೆ ನಡೆಸಲಾಗಿತ್ತು. ಕೇಸ್ ದಾಖಲಾಗಿ ೭ ದಿನದ ಬಳಿಕ ಚಿತ್ರದುರ್ಗದ ಮುರುಘಾ ಮಠದಲ್ಲೇ ಶ್ರೀಗಳನ್ನು ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶ್ರೀಗಳ ಬಂಧನಕ್ಕೂ ಮುನ್ನ ಮಠದ ಸುತ್ತ ಭಾರೀ ಭದ್ರತೆ ಕೈಗೊಳ್ಳಗಿತ್ತು .

ಮುರುಘಾ ಶ್ರೀಗಳು ಮಠದಲ್ಲಿ ತಮ್ಮ ಮೇಲೆ ಶ್ರೀಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಪುಟ್ಟ ಬಾಲಕಿಯರು ಆರೋಪಿಸಿದ್ದರು. ಈ ಬಗ್ಗೆ ಮುರುಘಾ ಶ್ರೀ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ರಾತ್ರಿ ಶ್ರೀಗಳನ್ನು ಮಠದಲ್ಲಿಯೇ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 27 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ದ ಪ್ರಕರಣ ದಾಖಲಾಗಿತ್ತು.ನಜರಬಾದ್ ಪೋಲಿಸರು ಮೈಸೂರಿನಿಂದ ಚಿತ್ರದುರ್ಗ ಗ್ರಾಮೀಣ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು.ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಕೋಮಲಾ ಮುರುಘಾಶ್ರೀಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸುವಂತೆ ಆದೇಶ ನೀಡಿದರು.ಚಿತ್ರದುರ್ಗ ಜಿಲ್ಲಾ ವರಿಷ್ಠಾಧಿಕಾರಿ ಪರಶುರಾಮ್ ,ಡಿವೈಎಸ್ ಪಿ ರಮೇಶ್ ಕುಮಾರ್ ನೇತೃತ್ವದ ತಂದ ಮುರಘಾಶ್ರೀಗಳನ್ನು ವಿಚಾರಣೆ ನಡೆಸಿ
ಗುರುವಾರ ಮಧ್ಯರಾತ್ರಿ ಬಂಧಿಸಲಾಗಿದೆ.ತದನಂತರ ಮುರುಘಾ ಶ್ರೀಗಳನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಚಿತ್ರದುರ್ಗ ಎಸ್ಪಿ ಪರಶುರಾಮ್ ಮಾತನಾಡಿ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲಿಸಿದ್ದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ.14 ದಿನಗಳ ಕಾಲ ಮುರುಘಾ ಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *