ಪಿರಿಯಾಪಟ್ಟಣ :4 ಆಗಸ್ಟ್ 2022
ನಂದಿನಿ ಮೈಸೂರು
ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಕೆರೆಕಟ್ಟೆ ಕೋಡಿ ಒಡೆದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಹಿನ್ನೆಲೆ ಮತ್ತು ಪಿರಿಯಾಪಟ್ಟಣ ತಾಲೂಕಿನ ಹಲವು ಗ್ರಾಮಗಳಲ್ಲಿ ಮನೆಗಳು ಮಳೆಯಿಂದ ಹಾನಿಯಾಗಿರುವ ಬಗ್ಗೆ ವೀಕ್ಷಣೆಗೆಂದು ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ದಿಡೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೇನಹಳ್ಳಿ ಕೆರೆಯು ಭಾರಿ ಮಳೆಯಿಂದಾಗಿ ಕೆರೆಯ ಕಟ್ಟೆ ಒಡೆದು ಕೋಡಿ ಹರಿದು ಅಪಾರ ಪ್ರಮಾಣದಲ್ಲಿ ಜಮೀನುಗಳಿಗೆ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಇಂದು ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ರವರು ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು ಇದೀಗ ಆಗಸ್ಟ್ ತಿಂಗಳಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಂಭವದ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳು ತುಂಬಿ ಹರಿದು ಕೋಡಿ ಹೊಡೆದ ಪರಿಣಾಮ ಕೆರೆ ಯಾ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಅಲ್ಲದೇ ಇತ್ತೀಚಿಗೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೆಲವು ಮನೆಗಳು ಬಿರುಕು ಬಿಟ್ಟು ಬೀಳುವ ಹಂತ ತಲುಪಿದ್ದು ಕೆಲವು ಮನೆಗಳು ನೆಲಕತ್ತಿವೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಂದು ಸ್ಥಳಪಡಿಸಲಿನ ನಡೆಸಿದ್ದು ಮಳೆಹನಿ ನಷ್ಟಕ್ಕೆ ಸರ್ಕಾರದಿಂದ ಸಿಗಬಹುದಾದ ಪರಿಹಾರದ ಸೌಲಭ್ಯವನ್ನು ಶೀಘ್ರವೇ ಫಲಾನುಭವಿಗಳಿಗೆ ದ್ವಾರಕೀಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮತ್ತೆ ಮುಂಜಾಗ್ರತ ಕ್ರಮವಾಗಿ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳನ್ನು ತುರ್ತು ಅಗತ್ಯ ಸೌಲಭ್ಯಗಳ ನ್ನು ಮಳೆ ಹಾನಿಗೆ ಒಳ ಪಟ್ಟ ಫಲಾನುಭವಿಗಳಿಗೆ ವಿತರಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಇದೇ ಸಂದರ್ಭ ತಿಳಿಸಿದರು.
ಈ ಸಂದರ್ಭ ಹುಣಸೂರು ವಿಭಾಗದ ಉಪ ವಿಭಾಗಾಧಿಕಾರಿ ವರನೀತ್ ನೀಗಿ.ಪಿರಿಯಾಪಟ್ಟಣ ತಹಸೀಲ್ದಾರ್ ಚಂದ್ರ ಮೌಳಿ. ಕಂದಾಯ ನಿರೀಕ್ಷಕ ಪ್ರದೀಪ್.ಬೈಲುಕೂಪ್ಪ ಪೋಲೀಸ್ ಠಾಣಾಧಿಕಾರಿ ಬಸವರಾಜು.ಗ್ರಾಮ ಲೆಕ್ಕಾಧಿಕಾರಿ ನವೀನ್ ರಾವ್.ಕಂದಾಯ ಇಲಾಖೆಯ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು.