ಎಚ್.ಡಿ.ಕೋಟೆಯಲ್ಲಿ 2026-27ನೇ ಸಾಲಿನ ಮೇ- 2026 ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ

ನಂದಿನಿ ಮನುಪ್ರಸಾದ್ ನಾಯಕ್

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಕುಮಾರಸ್ವಾಮಿ ಪಿಸಿ ರವರು ಹೆಚ್.ಡಿ.ಕೋಟೆ ತಾಲ್ಲೂಕಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಇಲ್ಲಿಗೆ ಭೇಟಿ ನೀಡಿ 2026-27ನೇ ಸಾಲಿನ ಮೇ- 2026 ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ನಡೆಸಲಾಯಿತ್ತು.


ಗರ್ಭಿಣಿ ಮಹಿಳೆಯರ ಮತ್ತು ಹೆಚ್.ಆರ್.ಪಿ ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ವರದಿ, ಹೆರಿಗೆ ನಿರ್ವಹಣೆ ಮತ್ತು ಹೆರಿಗೆ ನಿರ್ವಹಣೆಗೆ ತೆಗೆದುಕೊಂಡಿರುವ ಕ್ರಮಗಳು ಸೇರಿದಂತೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪ್ರಗತಿ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪರಿಶೀಲನೆ, ಗರ್ಭಿಣಿ ಮಹಿಳೆಯರಿಗೆ ಐ.ಎಫ್.ಎ ಮಾತ್ರೆಗಳ ವಿತರಣೆ, ಜೆ.ಎಸ್.ವೈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಸೇವಾ ಸಿಂಧೂ ತಂತ್ರಾಂಶದಲ್ಲಿ ದಾಖಲಿಕರಣ, PMSMA ಮತ್ತು e-PMSMA ಕಾರ್ಯಕ್ರಮದಲ್ಲಿ ಹೆಚ್.ಆರ್.ಪಿ ಗರ್ಭಿಣಿ ಬಾಣಂತಿಯರ ಆರೋಗ್ಯ ತಪಾಸಣೆ ಒಳಪಡಿಸಿರುವ ಮಾಹಿತಿಯ ಪರಿಶೀಲನೆ, ಅಪೌಷ್ಟಿಕ ಮಕ್ಕಳ ದಾಖಲಾತಿ, ಕುಟುಂಬ ಕಲ್ಯಾಣ ಯೋಜನೆಗಳ ಪ್ರಗತಿ ಪರಿಶೀಲನೆ ಮುಂದುವರಿದು, 2026-27ನೇ ಆರ್ಥಿಕ ವರ್ಷದ ಅವಧಿಯಲ್ಲಿ ಕ್ರಿಯಾಯೋಜನೆ ತಯಾರಿಸಿ ಆ ಮೂಲಕ ನಿಗಧಿತ ಸಮಯದೊಳಗೆ ಶೇಕಡ 100 ರಷ್ಟು ಪ್ರಗತಿ ಸಾಧಿಸಲು ಕ್ರಮ ವಹಿಸುವಂತೆ ಸೂಚಿಸಲಾಯಿತು

ಮುಂದುವರೆದು, ಸದರಿ ತಾಲ್ಲೂಕಿನ, ಮಾದಾಪುರ, ಕೆ.ಬೇಳ್ತೂರು, ಸಾಗರೆ ಮತ್ತು ಎನ್.ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು ಇದೇ ಸಂದರ್ಭದಲ್ಲಿ ಸದರಿ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳನ್ನು ಆಲಿಸಲಾಯಿತು. ಒಟ್ಟಾರೆಯಾಗಿ ಸಾರ್ವಜನಿಕರು ಆರೋಗ್ಯ ಸೇವೆಗಾಗಿ ಭೇಟಿ ನೀಡುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಉತ್ತಮ ರೀತಿಯಲ್ಲಿ ಆರೋಗ್ಯ ಸೇವೆಗಳನ್ನು ನೀಡಲು ಸೂಚಿಸಲಾಯಿತು ಮತ್ತು ಔಷಧ ಉಗ್ರಾಣಕ್ಕೆ ಭೇಟಿ ನೀಡಿ ಔಷಧಿಗಳ ಸಂಗ್ರಹಣೆಯ ಬಗ್ಗೆ ಖಾತರಿ ಪಡಿಸಿಕೊಳ್ಳಲಾಯಿತು. ಕಾಯಕಲ್ಪ ಕಾರ್ಯಕ್ರಮದಡಿಯಲ್ಲಿ ಪ್ರಶಸ್ತಿಗೆ ಭಾಜನರಾಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲು ಕ್ರಮವಹಿಸುವಂತೆ ಸೂಚಿಸಲಾಯಿತು.

 

Leave a Reply

Your email address will not be published. Required fields are marked *