ನಂದಿನಿ ಮೈಸೂರು
ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ.ಬಗಾದಿ ಗೌತಮ್ ಅವರನ್ನು ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ನಿರ್ದೇಶಕರಾಗಿ ನಿಯೋಜಿಸಲಾಗಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಡಾ.ಕೆ.ವಿ.ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.