ಪೊಲೀಸ್ ಗೃಹ ನಿರ್ಮಾಣ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾದ ಟಿ.ಎನ್.ನಾಗೇಶ್

 

ಮೈಸೂರು:23 ಆಗಸ್ಟ್ 2021

ನ@ದಿನಿ

ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎನ್.ನಾಗೇಶ್ ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದೆ ಅಧ್ಯಕ್ಷರಾಗಿದ್ದ ನಂಜುಂಡೇಗೌಡ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಸಂಘದ ಕಚೇರಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಈ ವೇಳೆ ಸಂಘದ ಎಲ್ಲಾ ನಿರ್ದೇಶಕರು ಒಮ್ಮತದಿಂದ ಟಿ.ಎನ್.ನಾಗೇಶ್ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದರು. ಇನ್ನುಳಿದಂತೆ ಉಪಾಧ್ಯಕ್ಷ ಸ್ಥಾನಕ್ಕೆ ಮರೀಗೌಡ ಅವರನ್ನೂ ಕೂಡ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ನೂತನವಾಗಿ ಆಯ್ಕೆಯಾದ ಅಧ್ಯಕ್ಷ , ಉಪಾಧ್ಯಕ್ಷರನ್ನು ನಿರ್ಗಮಿತ ಅಧ್ಯಕ್ಷ ನಂಜುಂಡೇಗೌಡ ಅವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಕೋರಿದರು.

ಈ ವೇಳೆ ಸಂಘದ ನಿರ್ದೇಶಕರಾದ ಎಸ್‌.ಪುಟ್ಟಣ್ಣ , ಸಿದ್ದರಾಜೇಗೌಡ, ಶಿವರಾಜು, ಬೇಬಿ, ರಾಜು, ಸುಂದರಿ, ನಾಗರಾಜು, ನಾಗೇಂದ್ರಪ್ರಕಾಶ್, ಮೋಹನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *