ಮೈಸೂರು:29 ನವೆಂಬರ್ 2021
ನಂದಿನಿ
ಮೈಸೂರು ಜಿಲ್ಲೆ ಗ್ರಾಮಲೆಕ್ಕಾಧಿಕಾರಿಗಳ ಸಂಘಕ್ಕೆ ಹಂಗಾಮಿ ಅಧ್ಯಕ್ಷರಾಗಿ ಮೈಸೂರು ತಾಲೂಕು ಕಚೇರಿಯ ಗ್ರಾಮಲೆಕ್ಕಾಧಿಕಾರಿ ಎಂ.ನಾಗೇಶ್ ಕುಮಾರ್ ನೇಮಕವಾಗಿದ್ದಾರೆ.
ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಬಿ.ದೊಡ್ಡಬಸಪ್ಪ ರೆಡ್ಡಿ ಪತ್ರದ ಮುಖೇನ ಅಧಿಕಾರ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.ಪೂರ್ಣಪ್ರಮಾಣದ ಅಧ್ಯಕ್ಷರಾಗಿ ಆಯ್ಕೆ ಆಗುವವರೆಗೂ ಜವಾಬ್ದಾರಿ ನಿರ್ವಹಿಸುವಂತೆ ತಿಳಿಸಿದ್ದಾರೆ.ಜಿಲ್ಲೆಯ ಗ್ರಾಮಲೆಕ್ಕಾಧಿಕಾರಿಗಳ ಸಮಸ್ಯೆಗೆ ಸ್ಪಂದಿಸುವುದು,ರಾಜ್ಯಾದ್ಯಂತ ಪ್ರವಾಸ ಮಾಡಿ ಗ್ರಾಮ ಲೆಕ್ಕಾಧಿಕಾರಿಗಳ ಕುಂದುಕೊರತೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವುದು,ತಾಲೂಕು ಅಧ್ಯಕ್ಷರ ಜೊತೆ ಉತ್ತಮ ಒಡನಾಟ ಹೊಂದಿ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದು. ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.