ನಂಜನಗೂಡು ನಂಜುಂಡೇಶ್ವರ ದರ್ಶನಕ್ಕಾಗಿ ನೂಕುನುಗ್ಗಲು ಆಡಳಿತ ಮಂಡಳಿ ವಿರುದ್ಧ ಭಕ್ತರು ಅಕ್ರೋಶ

ನಂದಿನಿ ಮೈಸೂರು

ನಂಜನಗೂಡು:ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಭಕ್ತರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಹುಣ್ಣಿಮೆಯ ಪ್ರಯುಕ್ತ
ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬಂದಿದೆ.
ಪ್ರತಿ ಹುಣ್ಣುಮೆಯಂದು ದೇವಾಲಯಕ್ಕೆ ಭಕ್ತರು ಹೆಚ್ಚಾಗಿ ಆಗಿಸುತ್ತಾರೆ ಈ ಬಾರಿಯೂ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ನೂಕುನುಗ್ಗಲು ಉಂಟಾಗಿದೆ.

ದೇವರ ದರ್ಶನಕ್ಕೆ ಸರಿಯಾಗಿ ವ್ಯವಸ್ಥೆ ಕಲ್ಪಿಸದೆ ನಿರ್ಲಕ್ಷೆ ವಹಿಸಿರುವ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.
ದೇವಾಲಯದ ಮುಂಭಾಗದಲ್ಲಿ ಭಕ್ತರನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಸಾಲುಗಟ್ಟಿ ನಿಂತಿದ್ದರು. ದೇವಾಲಯದ ಒಳಗೆ ಮತ್ತು ಹೊರಗೆ ಬರಲು ಸಾಧ್ಯವಾಗದೇ ನೂಕುನುಗ್ಗಲು ಏರ್ಪಟ್ಟಿದೆ.
ಪ್ರತಿ ತಿಂಗಳು ಹುಣ್ಣಿಮೆಯಲ್ಲಿ ಇದೇ ರೀತಿ ನಡೆಯುತ್ತಿದೆ ಆದ್ದರಿಂದ ದೇವಾಲಯದ ಆಡಳಿತ ಮಂಡಳಿ ದೇವರ ದರ್ಶನಕ್ಕೆ ಉತ್ತಮ ವ್ಯವಸ್ಥೆ ಕಲ್ಪಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *