ನ್ಯಾ.ಮಲ್ಲಿಕಾರ್ಜುನಗೌಡ ಶಿಕ್ಷೆಗೆ ಆಗ್ರಹಿಸಿ ಬೃಹತ್‌ ರ್ಯಾಲಿ ಜೈ ಭೀಮ್ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು:19 ಫೆಬ್ರವರಿ 2022

ನಂದಿನಿ ಮೈಸೂರು

ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಲಿ ಡಾ.ಬಿ.ಆರ್.ಅಂಬೇರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಕಾರೋಚ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಯಿತು .

ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ
ಸಂವಿಧಾನ ಸಂರಕ್ಷಣಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ವಿಧಾನಸೌಧ ಹಾಗೂ ನ್ಯಾಯಾಲಯ ಚಲೋ ಪ್ರತಿಭಟನಾ ಮೆರವಣಿಗೆ
ಕೇಂದ್ರ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರಗೆ ನೀಲು ಬಾವುಟ ನೀಲಿ ಶಾಲೂ ಜೊತೆಗೆ ಜೈ ಭೀಮ್ ಘೋಷಣೆ ಮೊಳಗಿತು.

ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಗೌರವಿಸಬೇಕು.ಮಲ್ಲಿಕಾರ್ಜುನ ಗೌಡ ಈ ರೀತಿ ನಡೆದುಕೊಳ್ಳಬಾರದಿತ್ತು.ಮುಂದಿನ ದಿನಗಳಲ್ಲಿ ಈ ತರಹದ ಘಟನೆ ಮರುಕಳಿಸದಂತೆ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಜೈ ಭೀಮ್ ಎಂದು ಘೋಷಣೆ ಕೂಗಿದರು.

Leave a Reply

Your email address will not be published. Required fields are marked *