ಹೊಸ ಮುಖಗಳಿಗೆ ಮನ್ನಣೆ ನೀಡಿ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಿದೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ :ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ

ನಂದಿನಿ ಮೈಸೂರು

ಮೈಸೂರು: ಕರ್ನಾಟಕ ರಾಜ್ಯದ ಮುಂದಿನ 40-50 ವರ್ಷ ಗಳ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮನ್ನಣೆ ನೀಡಿ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದೆ . ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದರು.

ಶನಿವಾರ ಮೈಸೂರಿನ ಚಾಮರಾಜಪುರಂನ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕಾರ್ಯಕರ್ತರ ಅಭಿಪ್ರಾಯಗಳಿಗೆ ಮನ್ನಣೆ ನೀಡಿ ಹಾಗೂ ಕೇಂದ್ರದ ವರಿಷ್ಠರು ಎಲ್ಲಾ ಕ್ಷೇತ್ರಗಳ ಸಮೀಕ್ಷೆಯನ್ನು ನಡೆಸಿ 75 ಮಂದಿ ಹೊಸ ಮುಖಗಳಿಗೆ ಟಿಕೆಟ್ ನೀಡಿ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರದ ವರಿಷ್ಠರಾದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮುಂದಿನ 40 -50 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಭವಿಷ್ಯವನ್ನು ರೂಪಿಸಲು ಡಾಕ್ಟರ್, ಇಂಜಿನಿಯರ್, ಐಎಎಸ್, ಐಪಿಎಸ್ ಬೇರೆ ಬೇರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಅವಕಾಶ ನೀಡಿದ್ದಾರೆ. ದೇಶದ ಬೆಳವಣಿಗೆಯಲ್ಲಿ ಕರ್ನಾಟಕ ತನ್ನದೇ ಕೊಡುಗೆಯನ್ನು ನೀಡುತ್ತಿದೆ. ಜಿಎಸ್ ಟಿ ನೀಡಿಕೆಯಲ್ಲಿ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಹಾಗಾಗಿ ಈ ಚುನಾವಣೆ ಮಹತ್ತರವಾದ ಪಾತ್ರವನ್ನು ವಹಿಸಲಿದೆ ಎಂದರು.
ಈಗಾಗಲೇ ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಹೊಸ ಪ್ರಯೋಗಗಳನ್ನು ಚುನಾವಣೆಯಲ್ಲಿ ಮಾಡಲಾಗಿತ್ತು . ನಮ್ಮ ರಾಜ್ಯದಲ್ಲೂ ಕೂಡ ಭವಿಷ್ಯದ ದೃಷ್ಟಿಯಿಂದ ಹೊಸ ಪ್ರಯೋಗವನ್ನು ಮಾಡಿ, ಯುವಕರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ, ಸ್ಪರ್ಧಿಸಲು ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ದೇಶದಲ್ಲಿ ದಿವಾಳಿಯಾಗಿದೆ. ಕಾಂಗ್ರೆಸ್ ನವರಿಗೆ ಈಗ ಎಲ್ಲೂ ನೆಲೆಯಿಲ್ಲ. ಹಾಗಾಗಿ ಹೇಗಾದರೂ ಮಾಡಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕೆಂದು ಪ್ರಯತ್ನ ನಡೆಸುತ್ತಿದ್ದಾರೆ. ದೆಹಲಿ ವರಿಷ್ಠರಿಗೆ ಕರ್ನಾಟಕವನ್ನು ಎಟಿಎಂ ಮಾಡಿಕೊಟ್ಟು, ಅವರಿಗೆ ಆರ್ಥಿಕ ಶಕ್ತಿಯನ್ನು ನೀಡುವ ಪಿತೂರಿಯನ್ನು ಕಾಂಗ್ರೆಸ್ ನವರು ನಡೆಸುತ್ತಿದ್ದು, ರಾಜ್ಯದ ಜನರು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಜೆಡಿಎಸ್ ನವರು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಬಂದರೆ ಮಾತ್ರ ನಮಗೆ ಭವಿಷ್ಯವಿದೆ ಎಂದು ಕನಸು ಕಾಣುತ್ತಿದ್ದಾರೆ. ಇದಕ್ಕೆ ರಾಜ್ಯದ ಜನರು ಅವಕಾಶವನ್ನು ನೀಡಬಾರದು. ಡಬಲ್ ಎಂಜಿನ್ ಬಿಜೆಪಿ ಸರ್ಕಾರವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆಂದು ಜನರು ತೀರ್ಮಾನ ಮಾಡಿದ್ದಾರೆ. ಆ ವಿಶ್ವಾಸ ತಮಗೆ ಇದೆ ಎಂದು ತಿಳಿಸಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರ ಕನಸು ನನಸಾಗುತ್ತದೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರ ರಾಜಕೀಯ ಶಕ್ತಿ, ವರ್ಚಸ್ಸುಕುಗ್ಗಿಲ್ಲ . ಬದಲಾಗಿ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ವರ್ಚಸ್ಸು, ಶಕ್ತಿ ಇನ್ನೂ ಹೆಚ್ಚಿದೆ. ಅವರು ರಾಜ್ಯಪಾಲರಾಗಬೇಕು, ತಮ್ಮ ಮಗ ಮುಖ್ಯಮಂತ್ರಿ ಆಗಬೇಕೆಂಬ ಕನಸನ್ನು ಕಂಡಿಲ್ಲ, ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಯನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಅವರ ಗುರಿ,ಸಂಕಲ್ಪ, ಕನಸಾಗಿದೆ.ಅದಕ್ಕಾಗಿ ಶ್ರಮಿಸುತ್ತಿದ್ದಾರೆ. ಯಡಿಯೂರಪ್ಪನವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಯಡಿಯೂರಪ್ಪನೆ ಅವರೊಂದು ಮಹಾಶಕ್ತಿ ಎಂದು ಬಣ್ಣಿಸಿದರು. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿದೆ . ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಂದಿನ ಸಿಎಂ ಯಾರಾಗಬೇಕೆಂಬುದನ್ನು ಶಾಸಕರ ಅಭಿಪ್ರಾಯಪಡೋದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಕಾಂಗ್ರೆಸ್ ನವರು ವೀರಶೈವ- ಲಿಂಗಾಯಿತ ಸಮುದಾಯದ ಬಗ್ಗೆ ಅನುಕಂಪದ ಮಾತುಗಳನ್ನು ಆಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ನವರು 170 ಸ್ಥಾನಗಳನ್ನು ಗೆದ್ದು ಮುಖ್ಯಮಂತ್ರಿ ಆಗಿದ್ದ ವೀರೇಂದ್ರ ಪಾಟೀಲರನ್ನು ಯಾವ ರೀತಿ ನಡೆಸಿಕೊಂಡು ಎಂಬುದು ಎಲ್ಲರಿಗೂ ಗೊತ್ತಿದೆ. ವೀರಶೈವ ಲಿಂಗಾಯತ ಧರ್ಮವನ್ನು ಕಾಂಗ್ರೆಸ್ ಸರ್ಕಾರ ಹೊಡೆಯಲು ಪ್ರಯತ್ನ ಮಾಡಿತ್ತು.ಇಷ್ಟೇ ಅಲ್ಲ ಸಮಾಜ – ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಇದಕ್ಕೆ ರಾಜ್ಯದ ಅವಕಾಶ ಮಾಡಿಕೊಡಬಾರದು. ಕಾಂಗ್ರೆಸ್ ನವರಿಗೆ ವೀರಶೈವ ಲಿಂಗಾಯಿತ ಸಮಾಜದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟಲ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದರಿಂದ, ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಯಾವುದೇ ನಕರಾತ್ಮಕ ಪರಿಣಾಮ ಬೀರುವುದಿಲ್ಲ ಎಂಬುದು ಮೇ 13 ರಂದು ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಗೊತ್ತಾಗುತ್ತದೆ. ಜಗದೀಶ್ ಶೆಟ್ಟರ್ ಅವರ ಕಥೆ ಏನಾಯ್ತು ಎಂಬುದು ತಿಳಿಯಲಿದೆ. ಜಗದೀಶ್ ಶೆಟ್ಟರ್ ಅವರಿಗೆ ಎದೆಗೆ ಗುಂಡು ಹಾರಿಸಿದ್ದು ಕಾಂಗ್ರೆಸ್ ನವರು ಎಂದು ತಿಳಿಯಲಿದೆ ಎಂದರು. ಶಿಕಾರಿಪುರ ಬಿಜೆಪಿ ಭದ್ರಕೋಟೆ. ಬಿಎಸ್ ಯಡಿಯೂರಪ್ಪರವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದೆ. ಕ್ಷೇತ್ರದಲ್ಲಿ ನಾನು ಅಭ್ಯರ್ಥಿ ಯಾಗಬೇಕೆಂದು ಯಡಿಯೂರಪ್ಪ, ಪಕ್ಷದ ವರಿಷ್ಠ ರು ತೀರ್ಮಾನ ಮಾಡಿದಲ್ಲ, ಕಾರ್ಯಕರ್ತರು ತೀರ್ಮಾನ ಮಾಡಿದ್ದು. ಅವರ ಅಭಿಪ್ರಾಯಕ್ಕೆ ಮನ್ನಣೆ ನೀಡಿ ಪಕ್ಷದ ವರಿಷ್ಠರು ನನ್ನನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ. ಹಾಗಾಗಿ ಈ ಬಾರಿ ಮತಗಳ ಅಂತರದಿಂದ ಅಲ್ಲಿ ಗೆದ್ದು ಬರುತ್ತೇನೆ . ಶಿಕಾರಿಪುರ ಈಗ ಭದ್ರಕೋಟೆಯಾಗಿರುವುದು ನಾನು ಗೆದ್ದ ಬಳಿಕ ಸುಭದ್ರ ಕೋಟೆಯಾಗಿ ಪರಿವರ್ತನೆ ಯಾಗಲಿದೆ ಎಂದು ಹೇಳಿದರು.

 

Leave a Reply

Your email address will not be published. Required fields are marked *