ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಡಾ.ಈ.ಸಿ.ನಿಂಗರಾಜ್ ಗೌಡ ಸಂತಾಪ

‌ನಂದಿನಿ ಮೈಸೂರು

ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಡಾ.ಈ.ಸಿ.ನಿಂಗರಾಜ್ ಗೌಡ ಸಂತಾಪ.

ಬಿಜೆಪಿಯ ಹಿರಿಯ ಮುಖಂಡರು, ಚಾಮರಾಜನಗರ ಕ್ಷೇತ್ರದ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರು ಮತ್ತು ಬಿಜೆಪಿ ಮುಖಂಡರಾದ ಡಾ.ಈ.ಸಿ.ನಿಂಗರಾಜ್ ಗೌಡ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕೇಂದ್ರದ ಮಾಜಿ ಆಹಾರ ಸಚಿವರಾದ ಅವರು 6 ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ, ಮಾಜಿ ಕಂದಾಯ ಸಚಿವರಾಗಿ ಜನಪ್ರಿಯತೆ ಪಡೆದಿದ್ದರು ಎಂದು ಅವರು ತಿಳಿಸಿದ್ದಾರೆ.

ಅವರ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಡಾ.ಈ.ಸಿ.ನಿಂಗರಾಜ್ ಗೌಡ,
ಸಿಂಡಿಕೇಟ್ ಮಾಜಿ ಸದಸ್ಯರು,
ಮೈಸೂರು ವಿಶ್ವವಿದ್ಯಾನಿಲಯ.
ಮೊಬೈಲ್ : 9980184789

Leave a Reply

Your email address will not be published. Required fields are marked *