ಮೈಸೂರು:30 ಏಪ್ರಿಲ್ 2022
ನಂದಿನಿ ಮೈಸೂರು
ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ಮೇ ೩ರಂದು ಕವಿ ಕೆ.ಎಸ್.ನಿಸಾರ್ ಅಹಮ್ಮದ್ ಅವರ ಸ್ಮಣರ‍್ಥ ‘ನೆನಪಿನೋತ್ಸವ’ ಮತ್ತು ನಿತ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಜಾಕೀರ್ ಹುಸೇನ್ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೧.೩೦ಕ್ಕೆ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆಯುವ ಕರ‍್ಯಕ್ರಮವನ್ನು ಸಂಸದ ವಿ.ಶ್ರೀನಿವಾಸ ಪ್ರಸಾದ್ ಉದ್ಘಾಟಿಸುವರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎನ್.ಎಂ.ನಂದೀಶ್ ಹಂಚೆ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕಾಂಗ್ರೆಸ್ ಮುಖಂಡ ಕೆ.ಹರೀಶ್ ಗೌಡ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ಇದೆ ವೇಳೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮತ್ತು ನಿಕಟ ಪರ‍್ವ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅವರಿಗೆ ಕವಿ ನಿಸಾರ್-ನಿತೋತ್ಸವ ಪ್ರಶಸ್ತಿಯನ್ನು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್ ಮಾತನಾಡಿ, ಕವಿ ಕೆ.ಎಸ್.ನಿಸಾರ್ ಅಹಮ್ಮದ್ ಅವರು ಸಂವೇದನಾಶೀಲ ಕವಿ. ಇವರ ಮೊದಲ ಭಾವಗೀತೆಗಳ ಧ್ವನಿ ಮುದ್ರಿಕೆ ನಿತೋತ್ಸವ ಹೊರಗೆ ಬಂದು ಸುಗಮ ಸಂಗೀತ ಕ್ಷೇತ್ರದಲ್ಲಿ ರ‍್ಜರಿ ಯಶಸ್ಸು ಪಡೆಯಿತು. ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಅವರು ನಾಡಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದರು.
ವಕೀಲ ಎ.ಆರ್.ಕಾಂತರಾಜು, ಯುವ ಮುಂಖಡರಾದ ರಾಜೇಶ್, ಪವನ್ ಸಿದ್ದರಾಮ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.