ದೇಪುರ ಗ್ರಾಮದಲ್ಲಿ ಪಡಿತರ ವಿತರಣಾ ಉಪ ಕೇಂದ್ರಕ್ಕೆ ಶಾಸಕ ಕೆ.ಮಹದೇವ್ ಚಾಲನೆ

ಪಿರಿಯಾಪಟ್ಟಣ:22 ಆಗಸ್ಟ್ 2022

ಸತೀಶ್ ಆರಾಧ್ಯ / ನಂದಿನಿ ಮೈಸೂರು

ಶಾಸಕನಾಗಿ ಆಯ್ಕೆಯಾದ ನಂತರ ಸಾರ್ವಜನಿಕ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುತ್ತಿದ್ದೇನೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

ತಾಲ್ಲೂಕಿನ ದೇಪುರ ಗ್ರಾಮದಲ್ಲಿ ಪಡಿತರ ವಿತರಣಾ ಉಪ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಗ್ರಾಮೀಣ ಪ್ರದೇಶ ಜನರು ಪಡಿತರ ಪಡೆಯಲು ತಮ್ಮ ಗ್ರಾಮಗಳಿಂದ ಬೇರೆಡೆ ಹೋಗಿ ಸಮಯ ಹಾಗೂ ಹಣ ವ್ಯಯ ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಆಯಾ ಗ್ರಾಮಗಳಲ್ಲಿಯೆ ಪಡಿತರ ಪಡೆಯಲು ಅವಕಾಶ ಕಲ್ಪಿಸುವಂತೆ ಆಹಾರ ಇಲಾಖೆ ಶಿರಸ್ತೇದಾರ್ ಸಣ್ಣಸ್ವಾಮಿ ಅವರಿಗೆ ಸೂಚಿಸಿದ್ದೆ ಈ ನಿಟ್ಟಿನಲ್ಲಿ ಅವರು ಆದ್ಯತೆಗನುಗುಣವಾಗಿ ತಾಲ್ಲೂಕಿನಾದ್ಯಂತ ಪಡಿತರ ಉಪಕೇಂದ್ರ ಆರಂಭ ಮಾಡುತ್ತಿದ್ದಾರೆ, ಸ್ವಾತಂತ್ರ ಬಂದು 75 ವರ್ಷವಾದರೂ ಸಹ ನಗರ ಪ್ರದೇಶಗಳ ಜನರಿಗೆ ಸಿಕ್ಕಿರುವ ಮೂಲಭೂತ ಸೌಕರ್ಯಗಳು ಗ್ರಾಮೀಣ ಪ್ರದೇಶಗಳ ಜನರಿಗೆ ದೊರಕುತ್ತಿಲ್ಲ, ಈ ಹಿಂದೆ ಆಡಳಿತ ನಡೆಸಿದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಗ್ರಾಮೀಣ ಪ್ರದೇಶಗಳು ಇನ್ನೂ ಹಿಂದುಳಿದಿವೆ, ತಾಲ್ಲೂಕಿನಲ್ಲಿ 400ಕ್ಕೂ ಹೆಚ್ಚು ಗ್ರಾಮಗಳಿದ್ದು ಎಲ್ಲವನ್ನು ಏಕಕಾಲದಲ್ಲಿ ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ, ಶಾಸಕನಾದಾಗಿನಿಂದ ರಾಜಕೀಯ ಬದ್ಧತೆ ಇಟ್ಟುಕೊಂಡು ಸಾರ್ವಜನಿಕರು ಪ್ರಶ್ನೆ ಮಾಡದ ಹಾಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದರು.

ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ ಅವರು ಮಾತನಾಡಿ 

ಶಾಸಕರು ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭ ಪಡಿತರ ಪಡೆಯಲು ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿ ಗ್ರಾಮಗಳಲ್ಲಿಯೂ ಮನವಿ ನೀಡುತ್ತಿದ್ದನು ಮನಗಂಡು ಪಡಿತರ ಉಪಕೇಂದ್ರಗಳ  ಸ್ಥಾಪನೆ ಮೂಲಕ ಸಮಸ್ಯೆ ಬಗೆಹರಿಸಲಾಗಿದೆ, ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶಗಳಿಗೆ ಹೆಚ್ಚು ಅನುದಾನ ನೀಡಿ ಅಭಿವೃದ್ಧಿ ಮಾಡುತ್ತಿರುವ ಕೀರ್ತಿ ಶಾಸಕರಿಗೆ ಸಲ್ಲುತ್ತದೆ ಎಂದರು. ತಹಸೀಲ್ದಾರ್ ಕೆ.ಚಂದ್ರಮೌಳಿ, ಆಹಾರ ಇಲಾಖೆ ಶಿರಸ್ತೇದಾರ್ ಸಣ್ಣಸ್ವಾಮಿ, ಮುಖಂಡರಾದ ಮೈಲಾರಪ್ಪ ಹಾಗು ಕರಿಗೌಡ ಮಾತನಾಡಿದರು.

ಈ ಸಂದರ್ಭ ಆಹಾರ ಇಲಾಖೆ ನಿರೀಕ್ಷಕ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾ.ಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ್, ಗ್ರಾ.ಪಂ ಅಧ್ಯಕ್ಷ ದೇವರಾಜ್, ಸದಸ್ಯರಾದ ರೇಣುಕಾ, ಕುಬೇರ್, ಗಣೇಶ್, ಮುಖಂಡರಾದ ಕಾಂತರಾಜ್, ಬಿ.ವಿ ಗಿರೀಶ್, ಗಣೇಶ್, ಕಾಳನಾಯಕ, ಕುಮಾರ್, ಶಿವಪ್ಪ, ಶಿಕ್ಷಕಗೋವಿಂದೆಗೌಡ, ಪಿಡಿಒ ಮಂಜುನಾಥ್ ಮತ್ತಿತರಿದ್ದರು.

Leave a Reply

Your email address will not be published. Required fields are marked *