ಸರಗೂರು:26 ಜನವರಿ 2022
ಇಂದು ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ವತಿಯಿಂದ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಯಿತು.
ತಾಲೂಕಿನ ಹಂಚಿಪುರ ಗ್ರಾಮಪಂಚಾಯಿತಿಯಲ್ಲಿ ದಸ್ ಕಾ ದಮ್ ಸ್ವಚ್ಛತಾ ಹರ್ ದಮ್ ಅಭಿಯಾನದ ಕೊನೆಯ ದಿನ 73ನೇ ಗಣರಾಜ್ಯೋತ್ಸವದಂದು ಓಡಿಎಫ್ ಪ್ಲಸ್ ಕುರಿತು ಪ್ಲಾಸ್ಟಿಕ್ ಬಳಕೆ ಬಗ್ಗೆ ಮಾಹಿತಿ ನೀಡಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಬೇಜವಾಬ್ದಾರಿಯುತವಾಗಿ ಬಳಸುವುದಿಲ್ಲ ಹಾಗೂ ಬಳಸಿದ ಪ್ಲಾಸ್ಟಿಕ್ಕನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತೇವೆ ಎಂದು ಪ್ರಮಾಣ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಗೌರವ ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ನ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಂಜಯ್ ಕೆ ಬೆಳತೂರು ಜೊತೆ ನಂದಿನಿ ಮೈಸೂರು