ಮೈಸೂರು:21 ಸೆಪ್ಟೆಂಬರ್ 2022
ನಂದಿನಿ ಮೈಸೂರು
ಪ್ರಧಾನಿ ನರೇಂದ್ರ ಮೋದಿ ರವರ 72ನೇ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ಗಾಯತ್ರಿಪುರಂ ಹಾಸ್ಟಲ್ ಆವರಣದಲ್ಲಿ 30 ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ರವರ ಜನ್ಮದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ನರಸಿಂಹರಾಜ ಕ್ಷೇತ್ರದ ಯುವ ಮೋರ್ಚಾ ಹಾಗೂ ಜೀವಾಧಾರ ಕೇಂದ್ರದ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದೆ.ಹೆಚ್ಚಿನ ಜನ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುತ್ತಿದ್ದಾರೆ.ಒಬ್ಬರ ರಕ್ತದಾನದಿಂದ ನಾಲ್ಕು ಜನರ ಜೀವ ಉಳಿಯಲಿದೆ.ದಾನಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಅಧ್ಯಕ್ಷ ಲೋಹಿತ್ ತಿಳಿಸಿದರು.
ಇದೇ ಸಂದರ್ಭದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ಸದಸ್ಯರು ಭಾಗಿಯಾಗಿದ್ದರು.