ಮೈಸೂರು:20 ಜೂನ್ 2022
ನಂದಿನಿ ಮೈಸೂರು
ಪ್ರಧಾನಿ ನರೇಂದ್ರ ಮೋದಿ ಚಾಮುಂಡಿಬೆಟ್ಟಕ್ಕೆ (Chamundi Hills) ತೆರಳಿದ್ರು. ರಸ್ತೆ ಮಾರ್ಗವಾಗಿಯೇ ದೇವರ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ತೆರಳಿದ್ರು. ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಂದೆ ಮೈಸೂರಿಗೆ ಬಂದಿದ್ರೂ ಚಾಮುಂಡೇಶ್ವರಿ ದರ್ಶನ ಪಡೆದಿರಲಿಲ್ಲ. ಈ ಬಾರಿ ಪ್ರಧಾನಿಗಳು ತಾಯಿ ಚಾಮುಂಡಿ ದರ್ಶನ ಪಡೆದಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವಾಲಯದ ಪ್ರಧಾನ ಅರ್ಚಕರು ಮೋದಿಗೆ ಸ್ವಾಗತ ಕೋರಿದ್ರು. ಇದೇ ವೇಳೆ ರಾಜ್ಯಪಾಲ ಗೆಹೋಟ್, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಕೇಂದ್ರ ಸಚಿವ ಜೋಶಿ, ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇನ್ನು ನಾಡಿನ ಅಧಿದೇವತೆ ಚಾಮುಂಡಿ ದರ್ಶನ ಪಡೆದ ಪ್ರಧಾನಿ ಮೋದಿ, ತಾಯಿ ಚಾಮುಂಡೇಶ್ವರಿಗೆ ಸಂಕಲ್ಪ ಪೂಜೆ ನೆರವೇರಿಸಿದ್ದಾರೆ. ಮುಖ್ಯ ಅರ್ಚಕ ಡಾ.ಶಶಿಶೇಖರ ದೀಕ್ಷಿತ್ ಸಂಕಲ್ಪ ಪೂಜೆ ಮಾಡಿದ್ರು.