ಅಗತ್ಯ ಸೇವೆಯಲ್ಲಿರುವರಿಗೆ ಅಂಚೆ ಮತಪತ್ರಗಳ ಮೂಲಕ ಮತದಾನಕ್ಕೆ ಅವಕಾಶ:ಕೆ.ವಿ.ರಾಜೇಂದ್ರ

ನಂದಿನಿ ಮೈಸೂರು

ಅಗತ್ಯ ಸೇವೆಯಲ್ಲಿರುವರಿಗೆ ಅಂಚೆ ಮತಪತ್ರಗಳ ಮೂಲಕ ಮತದಾನಕ್ಕೆ ಅವಕಾಶ:ಕೆ.ವಿ.ರಾಜೇಂದ್ರ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತದಾನ ದಿನದಂದು ಅಗತ್ಯ ಸೇವೆಯಲ್ಲಿರುವವರಿಗೆ ಅಂಚೆ ಮತಪತ್ರಗಳ ಮೂಲಕ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ಅವರು ಇಂದು ಪೋಸ್ಟಲ್ ಬ್ಯಾಲೆಟ್ ಮತದಾನಕ್ಕೆ ಸಂಬಂಧಿಸದಂತೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ, ಅಗತ್ಯ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂದರೆ ವಿದ್ಯುತ್ ಇಲಾಖೆ, ಬಿ.ಎಸ್.ಎನ್.ಎಲ್., ರೈಲ್ವೆ, ಆರೋಗ್ಯ ಇಲಾಖೆ, ವಿಮಾನಯಾನ, ಸಾರಿಗೆ ಸೇವೆ (ಕೆ.ಕೆ.ಆರ್.ಟಿ.ಸಿ), ಅಗ್ನಿಶಾಮಕದಳ, ಚುನಾವಣಾ ದಿನದ ಕವರೇಜ್ ಮಾಡುವ ಅಧಿಕೃತ ಮಾಧ್ಯಮ ಪ್ರತಿನಿಧಿಗಳು, ಟ್ರಾಫಿಕ್ ಪೊಲೀಸ್ ಹಾಗೂ ಆಂಬ್ಯುಲೆನ್ಸ್ ಸೇವೆಯಲ್ಲಿರುವವರಿಗೆ ಅಂಚೆ ಮತಪತ್ರಗಳ ಮೂಲಕ ಮತಚಲಾಯಿಸಲು ಅವಕಾಶವಿರುತ್ತದೆ. ಅಗತ್ಯ ಸೇವೆಯಲ್ಲಿರುವವರು ಮತದಾನದಿನದ ಏಳು ದಿನ ಮುಂಚಿತವಾಗಿ ನಮೂನೆ 12ಡಿ ರಲ್ಲಿ ಭರ್ತಿ ಮಾಡಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ನಮೂನೆ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳ ಮುಖ್ಯಸ್ಥರು ಅನುಮೊದನೆ ನೀಡಬೇಕು. ನಾಮಪತ್ರ ಪ್ರಕ್ರಿಯೆ ಮುಗಿದ ನಂತರ ಗೌಪ್ಯವಾಗಿ ಅಂಚೆ ಮತಪತ್ರಗಳ ಮೂಲಕ ಮತ ಚಲಾವಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು, ಮತದಾನದಿನದಂದು ಅಗತ್ಯ ಸೇವೆಯಲ್ಲಿ ಕಾರ್ಯನಿರ್ವಹಿಸುವ ನೌಕರರು, ಸಿಬ್ಬಂದಿಗೆ ನಮೂನೆ ಅರ್ಜಿ ಸಲ್ಲಿಸುವ ಕುರಿತಂತೆ ಮಾಹಿತಿ ನೀಡುವುದರ ಜೊತೆಗೆ ಮತದಾನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಪೋಸ್ಟಲ್ ಬ್ಯಾಲೆಟ್ ನ ಜಿಲ್ಲಾ ನೋಡೆಲ್ ಅಧಿಕಾರಿ ವಿಷ್ಣುವರ್ಧನ ರೆಡ್ಡಿ, ಇಲಾಖೆಯ ಎಲ್ಲ ನೋಡೆಲ್ ಅಧಿಕಾರಿಗಳು ಉಪಸ್ಧಿತರಿದ್ದರು.

Leave a Reply

Your email address will not be published. Required fields are marked *