ಮಕ್ಕಳಲ್ಲಿರುವ ಪಠ್ಯೇತರ ಪ್ರತಿಭೆ ಹೊರಬರಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿ: ಬಿಇಒ ಬಸವರಾಜು

ಪಿರಿಯಾಪಟ್ಟಣ:28 ಆಗಸ್ಟ್ 2022

ಸತೀಶ್ ಆರಾಧ್ಯ / ನಂದಿನಿ ಮೈಸೂರು

ಮಕ್ಕಳಲ್ಲಿರುವ ಪಠ್ಯೇತರ ಪ್ರತಿಭೆ ಅನಾವರಣ ಮಾಡಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಲಿವೆ ಎಂದು ಬಿಇಒ ಬಸವರಾಜು ಹೇಳಿದರು.

ತಾಲ್ಲೂಕಿನ ಭುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಭುವನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ವಿದ್ಯಾರ್ಥಿಗಳ ಪ್ರತಿಭೆಯನ್ನು ಕೇವಲ ಪಠ್ಯ ಪುಸ್ತಕಗಳಿಂದ ನೋಡದೆ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರಿಂದ ಪ್ರತಿಭಾನ್ವಿತರಿಗೆ ಅವಕಾಶ ಸಿಗಲಿದೆ ಗ್ರಾಮಾಂತರ ಭಾಗದಲ್ಲಿ ಪ್ರತಿಭಾವಂತರಿಗೆ ಕೊರತೆಯಿಲ್ಲ ಅವರಲ್ಲಿರುವ ಪ್ರತಿಭೆ ಇತರರಿಗೆ ತಿಳಿಯಲು ನಾವುಗಳು ವೇದಿಕೆ ಸೃಷ್ಟಿಸಬೇಕಾಗಿದೆ ಎಂದರು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ ಅವರು ಮಾತನಾಡಿ ಪೋಷಕರು ತಮ್ಮ ಮಕ್ಕಳಲ್ಲಿನ ವಿಶೇಷ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.

ನಿವೃತ್ತ ಮುಖ್ಯಶಿಕ್ಷಕ ಸಣ್ಣಸ್ವಾಮಿಗೌಡ ಅವರು ಮಾತನಾಡಿ ವಿದ್ಯಾರ್ಥಿಗಳ ವಿಶೇಷ ಪ್ರತಿಭೆಗಳಿಗೆ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಾಧನೆಗೆ ಸಹಕರಿಸಬೇಕಿದೆ ಎಂದರು. 

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಹಾಗೂ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ರಂಜಿಸಿದರು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಮಮತಾ ಮಂಜುನಾಥ್, ಉಪಾಧ್ಯಕ್ಷೆ ದೀಪು ಗಿರೀಶ್ ಹಾಗೂ ಸದಸ್ಯರು, ಪಿಎಸಿಸಿಎಸ್ ಅಧ್ಯಕ್ಷ ಹರೀಶ್ ಹಾಗೂ ನಿರ್ದೇಶಕರು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಣಿಕಂಠ ಹಾಗೂ ನಿರ್ದೇಶಕರು, ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ್, ಸಿಆರ್ ಪಿ ಚೇತನ್, ಭುವನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಯಶೋದ, ಎಸ್ ಡಿಎಂಸಿ ಅಧ್ಯಕ್ಷ ಶಿವಕುಮಾರ್ ಹಾಗೂ ಸದಸ್ಯರು, ಪ್ರೌಢಶಾಲೆ ಮುಖ್ಯಶಿಕ್ಷಕ ಗಿರೀಶ್, ಎಸ್ ಡಿಎಂಸಿ ಅಧ್ಯಕ್ಷ ಹೇಮಪ್ರಭ, ಕ್ಲಸ್ಟರ್ ವ್ಯಾಪ್ತಿಯ ಮುಖ್ಯಶಿಕ್ಷಕರುಗಳಾದ ವಿಶುಕುಮಾರ್, ಈ.ಬಿ ವೆಂಕಟೇಶ್, ಲಕ್ಷ್ಮೀಶ, ಮೋಹನ್, ಕೃಷ್ಣ, ರಘು, ಮಧುರೇಶ್, ಬೀನಾ, ಸ್ಮಿತಾ, ಧರ್ಮ, ಶಿವಪ್ಪ ಹಾಗೂ ಗ್ರಾಮದ ಯಜಮಾನರು ಮುಖಂಡರು ಶಿಕ್ಷಕರು ಪೋಷಕರು ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *