ನಂದಿನಿ ಮೈಸೂರು
ವಿಜಯರಂಗ ಚಾರಿಟಬಲ್ ಟ್ರಸ್ಟ್ನ ಚಾಮುಂಡಿ ಬೆಟ್ಟದ ಪಾದದ ಬಳಿ ಇರುವ ಮಾರ್ವೆಲ್ ಪದವಿ ಪೂರ್ವ ಕಾಲೇಜು ವತಿಯಿಂದ ಮಾರ್ಚ್ ಐದರಂದು ಕಾಲೇಜು ಆವರಣದಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಶೋಧ ಪರೀಕ್ಷೆ ಆಯೊಜಿಸಿರುವುದಾಗಿ ಪ್ರಾಚಾರ್ಯ ಪೆರಿಯ ನಾಯಗಮ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಅಂದು ಬೆಳಗ್ಗೆ ೧೦ ಕ್ಕೆ ಪರೀಕ್ಷೆ ನಡೆಯಲಿದೆ. ಈ ವೇಳೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳ ಮೇಲೆ ೫೦ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ನೀಡಲಾಗುವುದು. ಇದು ಸುಮಾರು ೧.೩೦ ಗಂಟೆ ಅವಧಿಯದ್ದಾಗಿದ್ದು, ಇದರಲ್ಲಿ ಹೆಚ್ಚು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದವರಿಗೆ ಪ್ರಥಮವಾಗಿ ೫೦ ಸಾವಿರ, ದ್ವಿತೀಯ ಬಹುಮಾನವಾಗಿ ೨೫ ಸಾವಿರ, ತೃತೀಯ ಬಹುಮಾನವಾಗಿ ೧೦ ಸಾವಿರ, ನಾಲ್ಕನೇ ಬಹುಮಾನವಾಗಿ ಐದು ಸಾವಿರ ಮತ್ತು ೨೦ ಸಮಾಧಾನಕರ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂ. ೦೮೨೧-೨೯೫೦೯೭೧, ೭೬೭೬೫ ೮೧೪೪೧ ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ
ಟ್ರಸ್ಟ್ ಅಧ್ಯಕ್ಷ ಸಿದ್ದೇಗೌಡ, ಕಾರ್ಯದರ್ಶಿ ಗಿಣಿಸ್ವಾಮಿ ಹಾಜರಿದ್ದರು.