144 Views
ಮೈಸೂರು:18 ಜುಲೈ 2022
ನಂದಿನಿ ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರಿಗೆ ಬೂಸ್ಟರ್ ಲಸಿಕೆ ನೀಡುವ ಕಾರ್ಯಕ್ಕೆ ವಾರ್ತಾ ಭವನದಲ್ಲಿ ಇಂದು ಚಾಲನೆ ನೀಡಲಾಯಿತು.
ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೇಯರ್ ಸುನಂದಾ ಪಾಲನೇತ್ರ, ಡಿ.ಎಚ್.ಓ ಡಾ. ಕೆ.ಎಚ್. ಪ್ರಸಾದ್, ನಗರಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜ್,ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಹರೀಶ್,ರಮೇಶ್, ವೈದ್ಯರಾದ ಜಯಂತ್, ರವಿ, ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಕಾರ್ಯದರ್ಶಿ ರಂಗಸ್ವಾಮಿ, ಖಜಾಂಚಿ ನಾಗೇಶ್ ಪಾಣತ್ತಲೆ, ರಾಜ್ಯ ಸಮಿತಿ ಸದಸ್ಯ ಬಿ. ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.