ನಂದಿನಿ ಮೈಸೂರು
ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಸುಮಾರು 187 ಕೋಟಿಯಷ್ಟು ಹಣವನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ
ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾ ಪಂಜಾಯಿತಿ ಕಚೇರಿ ಮುಂಭಾಗದ ರಸ್ತೆಯಲ್ಲಿ ಜಮಾಹಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ದ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪ್ರಭಾಕರ ಹುಣಸೂರು,ರಾಜು ಮಾರ್ಕೆಟ್ ಮಾತನಾಡಿ
ಇತ್ತೀಚಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಷ್ಟಾವಂತ ಅಧಿಕಾರಿಯಾದ ಚಂದ್ರಶೇಖರ ರವರು ಅತ್ಮಹತ್ಯೆ ಮಾಡಿಕೊಂಡು ಡೆತ್ ನೋಟ್ ನಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 187 ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಅವ್ಯವಹಾರದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ನೀಡಿದ ಕೈಗನ್ನಡಿ ಎನ್ನುವಂತಾಗಿದೆ. ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಎಲ್ಲಾ ಜಿಲ್ಲೆಗಳ ನಿಗಮದಿಂದ ಹಣವನ್ನು ತೆಗೆದುಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಕುತ್ತು ತಂದು ಅಧಿಕಾರಿಗಳ ಮೇಲೆ ಒತ್ತಡ ತಂದು ನಿಗಮದಿಂದ ಹಣವನ್ನು ದುರುಪಯೋಗ ಮಾಡಿಕೊಂಡು ಅವ್ಯವಹಾರ ನಡೆಸಿದ್ದಾರೆ.ಆದ್ದರಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಭ್ರಷ್ಟಾ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರು ನಿಷ್ಠಾವಂತ ಅಧಿಕಾರಿಗಳನ್ನ ಹೆದುರಿಸಿ ಅಕ್ರಮ ಮಾಡುವಂತೆ ಒತ್ತಡ ತಂದು ಅಧಿಕಾರಿಯ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಕೂಡಲೇ ಸಮಾಜ ಕಲ್ಯಾಣ ಸಚಿವರು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಡುವಾರಹಳ್ಳಿ ಎಂ. ರಾಮಕೃಷ್ಣ, ಪ್ರಭಾಕರ್ ಹುಣಸೂರು, ಶ್ರೀಧರ್ ಚಾಮುಂಡಿಬೆಟ್ಟ, ಕೆರೆಹಳ್ಳಿ ಮಾದೇಶ್, ಹಿನಕಲ್ ಚಂದ್ರ, ವಿಜಯ್ ಕುಮಾರ್, ಸುರೇಶ್ ಕುಮಾರ್‌ಬೀಡು, ಮಾರ್ಕೆಟ್ ರಮೇಶ್, ಎಚ್.ಆರ್. ಪ್ರಕಾಶ್, ರಂಗಸ್ವಾಮಿ,ಪುಟ್ಟರಾಜು,ರವಿ,ಮಂಜುನಾಥ್, ಮೂರ್ತಿ,ಮಹದೇವು,ನಂದೀಶ್ ಸೇರಿದಂತೆ ಇತತರು ಭಾಗಿ ಯಾಗಿದ್ದರು.