ನಂದಿನಿ ಮೈಸೂರು
ಮೈಸೂರು ಕೋರ್ಟ್ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಪ್ರದೇಶ ಕುರುಬರ ಸಂಘ ಮತ್ತು ಶೋಷಿಕ
ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷ ಐಸುಬ್ರಮಣ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕೇಂದ್ರ ಸರ್ಕಾರ ಮತ್ತು ಜೆಡಿಎಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷ ಬಿ.ಸುಬ್ರಮಣ್ಯ ಮಾತನಾಡಿ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡೋಲ್ಲ
ಜೆಡಿಎಸ್, ಬಿಜೆಪಿ ಕುತಂತ್ರ ಫಲಿಸೋಲ್ಲ.ಸಿದ್ದರಾಮಯ್ಯ ಅವರೊಂದಿಗೆ ನಾವಿದ್ದೇವೆ
ಪ್ರಾಸಿಕ್ಯೂಷನ್ ವಿಚಾರವಾಗಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿರೋಧ ಪಕ್ಷದ ನಾಯಕರ ವಿರುದ್ದ ಕಿಡಿಕಾರಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್
ಎಸ್.ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17 ಎ ಪ್ರಕಾರ ತನಿಖೆಗೆ ಆದೇಶಿಸಿದೆ.
ಬಿಜೆಪಿ ಜೆಡಿಎಸ್ ಅವರ ಕುತಂತ್ರಕ್ಕೆ ಸಿದ್ದರಾಮಯ್ಯನವರು ಹೆದರುವುದಿಲ್ಲ. ರಾಜ್ಯದ ಜನ ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು. ಕಾರ್ಯಕರ್ತರು ಸಿದ್ದರಾಮಯ್ಯ ಜೊತೆಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ಸಿದ್ದರಾಮಯ್ಯನವರ ಮೇಲಷ್ಟೇ ಅಲ್ಲ. ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಮೇಲೆ ಸೇಡಿನ ರಾಜಕೀಯ ಮಾಡುತ್ತಿದ್ದಾರೆ.
ದ್ವೇಷದ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಮಗೆ ಸಿ. ಎಂ ಸಿದ್ದರಾಮಯ್ಯ ರಾರ್ಜನಾಮೆ ಕೇಳುವ ನೈತಿಕತೆ ಇಲ್ಲ, ಬಡವರ ಪರ, ದಲಿತರ ಪರ, ಹಿಂದುಳಿದವರ ಪರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿರುವ ಜನಪರ ಆಡಳಿತ ನೀಡುತ್ತಿರುವುದನ್ನು ಸಹಿಸಲಾರದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಪಪ್ರಕಾರ ಮಾಡುತ್ತಿದ್ದಾರೆ. ಯಾರು ಎಷ್ಟೇ ಅಪಪ್ರಚಾರ ಮಾಡಿದರು ಕೂಡ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ.
ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ ಅಲ್ಲಿ ನಮ್ಮ ನಾಯಕರಾದ ಸಿದ್ದರಾಮಯ್ಯನವರ ಪರ ತೀರ್ಪ ಬರುತ್ತೆ, ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದರು.
ಕುರುಬ ಸಮುದಾಯದ ಮುಖಂಡರು ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯ ಕರ್ತರು ಉಪಸ್ಥಿತರಿದ್ದರು.