ಮೈಸೂರು:19 ಸೆಪ್ಟೆಂಬರ್ 2022
ನಂದಿನಿ ಮೈಸೂರು
ಎಫ್ ಡಿಐ ಪರೀಕ್ಷೆ ಹಗರಣ ಆರೋಪದಡಿ
ಮೈಸೂರಿನ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ ಅಶ್ವಿನಿ ಅನಂತಪುರ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಆರೋಪ.
ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರುವ ಆಡಿಯೋ ,ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ದಾಖಲೆಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ ರವರು
ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.