ಮೈಸೂರು:11 ಜನವರಿ 2022
ನಂದಿನಿ ಮೈಸೂರು
ಮೈಸೂರಿನ ಆರ್.ಸಿ ಬಡಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಭೇಟಿ ನೀಡಿ
ಬಡಾವಣೆಯಲ್ಲಿರುವ ಯುಜಿಡಿ, ವಿದ್ಯುತ್ ದೀಪ, ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು.
ವಿಜಯನಗರ4ನೇ ಹಂತಕ್ಕೆ ಹೊಂದಿಕೊಂಡಂತೆ ಇರುವ ಆರ್.ಸಿ. ಬಡಾವಣೆಯಲ್ಲಿ
ಮಳೆ ಬಂದರೆ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಸಮಸ್ಯೆ ಆಗಲಿದೆ.ಕುಡಿಯುವ ನೀರು, ಬೀದಿ ದೀಪ, ಯುಜಿಡಿ, ರಸ್ತೆ ಹಾಗೂ ರಾಜಕಾಲುವೆ ಅತ್ಯಂತ ಪ್ರಮುಖ ಸಮಸ್ಯೆಯಾಗಿದೆ.
ಈ ಭಾಗದಲ್ಲಿ ಒಟ್ಟು 7-8 ಬಡಾವಣೆಗಳಿದ್ದು ಹಲವಾರು ವರ್ಷದಿಂದಲೂ ಇದೇ ಸಮಸ್ಯೆ ಇದೆ.ದಯವಿಟ್ಟು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯ ನಿವಾಸಿಗಳು ಶಾಸಕರಿಗೆ ಮನವಿ ಮಾಡಿದರು.
ಎಲ್ಲಾ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿ.ಟಿ. ದೇವೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಮುಡಾ, ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.