ಪಿರಿಯಾಪಟ್ಟಣ:9 ಆಗಸ್ಟ್ 2022
ಸತೀಶ್ ಆರಾಧ್ಯ / ನಂದಿನಿ ಮೈಸೂರು
ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಸತತ ಮಳೆಯಿಂದಾಗಿ ತಾಲ್ಲೂಕಿನ ಬೆಕ್ಕರೆ ಗ್ರಾಮದ ಬಿ.ಬಿ ರಮೇಶ್ ಎಂಬುವರಿಗೆ ಸೇರಿದ ವಾಸದ ಮನೆ ಗೋಡೆ ಕುಸಿದು ನಷ್ಟ ಉಂಟಾಗಿದೆ.
ಹವಾಮಾನ ವೈಪರಿತ್ಯದಿಂದ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ನಷ್ಟ ಉಂಟಾಗಿರುವುದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.