ಎಚ್.ಡಿ.ಕೋಟೆ:7 ಸೆಪ್ಟೆಂಬರ್ 2022
ನಂದಿನಿ ಮೈಸೂರು
ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಎಚ್ ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದ ನಾಗಮ್ಮ ಮತ್ತು ಲಕ್ಕೇಗೌಡರಿಗೆ ಸೇರಿದ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ, ಸದ್ಯ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಸಿದ ಮನೆಯಲ್ಲಿ ಈಗ ವಾಸಮಾಡಲು ಸಾಧ್ಯವಾಗದ ಕಾರಣ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಗ್ರಾಮಲೆಕ್ಕಿಗರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸರ್ಕಾರದಿಂದ ಸಿಗುವ ಸವಲತ್ತು ಕಲ್ಪಿಸುವ ಭರವಸೆ ನೀಡಿದ್ದಾರೆ.