ನಂದಿನಿ ಮೈಸೂರು
ಅದ್ದೂರಿ ಗಣರಾಜ್ಯೋತ್ಸವ ಆಚರಣೆ – ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ
—————————————-
ಮೈಸೂರು ಜಿಲ್ಲಾಡಳಿತದ ವತಿಯಿಂದ 74 ನೇ ಗಣರಾಜ್ಯೋತ್ಸವ ಆಚರಣೆ ಯನ್ನು ನಗರದ ಬನ್ನಿಮಂಟಪ ಕವಾಯತು ಮೈದಾನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಪೊಲೀಸ್ ರಿಂದ ಧ್ವಜ ವಂದನೆ ಸ್ವೀಕರಿಸಿದರು.
ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಶ್ವದಳ, ವಿವಿಧ ತುಕಡಿಗಳು ಹಾಗೂ ಶಾಲಾ ಕಾಲೇಜುಗಳ ವಿವಿಧ ತಂಡಗಳು ಪಥ ಸಂಚಲನದ ಲ್ಲಿ ಭಾಗವಹಿಸಿದ್ದವು.
ಗಣರಾಜ್ಯೋತ್ಸವದ ಸಂದೇಶ ನೀಡಿದ ಸಚಿವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ನಂತರ ವಿವಿಧ ಶಾಲಾ ಕಾಲೇಜುಗಳ ತಂಡಗಳಿಂದ ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶನ ನಡೆಯಿತು.
ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ನೀಡಿದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.