ಮಾಜಿ ಶಾಸಕರು,ಮಾಜಿ ಮೇಯರ್ ಆದ ವಾಸು ನಿಧನ

ನಂದಿನಿ ಮೈಸೂರು

ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು ಮೈಸೂರಿನಲ್ಲಿಂದು ನಿಧನರಾಗಿದ್ದಾರೆ.
ಮಾಜಿ ಶಾಸಕ ವಾಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.   ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದಾರೆ.  ಕಳೆದ ಬಾರಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು. ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿದ್ದು ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದು ಅನೇಕ ಯುವ ಪತ್ರಕರ್ತರಿಗೆ ನೆರವಾಗಿದ್ದಾರೆ.

Leave a Reply

Your email address will not be published. Required fields are marked *