116 Views
ಮೈಸೂರು:19 ಆಗಸ್ಟ್ 2021
ನ@ದಿನಿ
ಕೊವಿಡ್ ನಿಂದ ಮೃತ ಪಟ್ಟ ಕುಟುಂಬಗಳಿಗೆ ಸಹಾಯ ಧನ ಹಸ್ತಾಂತರಿಸಲಾಯಿತು.
ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಹಾಯ ಹಸ್ತ ಕಾರ್ಯಕ್ರಮಕ್ಕೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.
ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಕೊವಿಡ್ ನಿಂದ ಮೃತ ಪಟ್ಟ 150 ಕುಟುಂಬಗಳಿಗೆ ಡಾ.ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಹರೀಶ್ ಗೌಡ10ಸಾವಿರ ಧನ ಸಹಾಯ ಹಸ್ತಾಂತರಿಸಿದರು.
ನಂತರ ಮಾತನಾಡಿದ ಹರೀಶ್ ಗೌಡ ರವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಹುಟ್ಟು ಹಬ್ಬದ ಅಂಗವಾಗಿ ಕೋವಿಡ್ ನಿಂದ ಮೃತ ಪಟ್ಟ ಕುಟುಂಬಗಳಿಗೆ ತಲಾ 10 ಸಾವಿರ ಧನ ಸಹಾಯ ಮಾಡಿದ್ದೇನೆ.ಈ ಸಹಾಯ ಹಸ್ತ ಕಾರ್ಯಕ್ರಮ ನನಗೆ ತೃಪ್ತಿಯನ್ನ ತಂದುಕೊಟ್ಟಿದೆ.ಮುಂದಿನ ದಿನಗಳಲ್ಲೂ ಇಂತಹದ್ದೇ ಸಹಾಯ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕಾಂಗ್ರೆಸ್ ಮುಖಂಡ ಸುನಿಲ್ ಬೋಸ್,ಗೋಪಿ ಮತ್ತಿತರರು ಭಾಗಿಯಾಗಿದ್ದರು.