ಮೈಸೂರು:19 ಏಪ್ರಿಲ್ 2022
ನಂದಿನಿ ಮೈಸೂರು
ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ
ಸರ್ವೋತ್ತಮ ಸೇವಾ ಪ್ರಶಸ್ತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಜೆ.ಗೋವಿಂದರಾಜು ಮಾಹಿತಿ ನೀಡಿದರು.
ಏ. 21ರಂದು ಮೈಸೂರು ಜಿಲ್ಲಾಡಳಿತ ,ಮೈಸೂರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಹಯೋಗದೊಂದಿಗೆ
ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿರುವ ಸಮಾರಂಭವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವರ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಶಾಸಕರು , ಸಂಸದರು , ನಿಗಮ ಮಂಡಳಿಗಳ ಅಧ್ಯಕ್ಷರುಗಳು , ಸ್ಥಳೀಯ ಜನಪ್ರತಿನಿಧಿಗಳು , ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.ಸರ್ಕಾರಿ ಸೇವೆಯಲ್ಲಿ ಉತ್ತಮ ಕೆಲಸ ನಿರ್ವಹಿಸುವ 20 ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಜೊತೆಗೆ 10 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ
ಪ್ರಧಾನ ಕಾರ್ಯದರ್ಶಿ ರೇವಣ್ಣ , ಕಾರ್ಯಾಧ್ಯಕ್ಷರಾದ ಆನಂದ.ಡಿ ,ಹಿರಿಯ ಉಪಾಧ್ಯಕ್ಷರಾದ ಎಸ್.ಜೆ.ರಮೇಶ್ ಉಪಾಧ್ಯಕ್ಷರಾದ ಮಾಲಂಗಿ ಸುರೇಶ್ , ಕಾರ್ಯದರ್ಶಿ ಎಸ್.ರಘು ಇದ್ದರು.