ನಂದಿನಿ ಮೈಸೂರು
ಶ್ರೀ ಸತ್ಯಸಾಯಿಬಾಬಾ ಶಾಲೆಯ ಕೃಷ್ಣಮೂರ್ತಿರವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ಶಾಲೆಯ ಸಭಾಂಗಣದಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ,ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರು ಹಾಗೂ ಸಂಜಯ್ ಎಲೆಕ್ಟ್ರಿಕಲ್ಸ್ ಮಾಲೀಕರಾದ ಆರ್.ಶ್ರೀಪಾಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ ಕೃಷ್ಣಮೂರ್ತಿರವರಿಗೆ ಅಭಿನಂಧಿಸಲಾಯಿತು.ವೇದಿಕೆಯ ಗಣ್ಯರು, ಶಾಲೆಯ ಮಕ್ಕಳು ಹಾಗೂ ಶಾಲೆಯ ಸಿಬ್ಬಂದಿಗಳು ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭಹಾರೈಸಿದರು.ನಂತರ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಸದಸ್ಯೆ ಭಾಗ್ಯ ಮಾದೇಶ್,ಫೈಲ್ವಾನ್ ಶ್ರೀನಿವಾಸ್,
ರವಿ ನಾಯಕ್,ಯೋಗೇಶ್ ಯಾದವ್,ದೀಪಕ್ ಪುಟ್ಟಸ್ವಾಮಿ,ಕೃಷ್ಣಪ್ಪ,ಪುನೀತ್ ಗೌಡ,ರಮೇಶ್,ಪಾಪಣ್ಣ,ಸುನೀಲ್ ನಾರಾಯಣ್ ಹಾಗೂ ಶಾಲಾ ಸಿಬ್ಬಂದಿಗಳು ಭಾಗಿಯಾಗಿದ್ದರು.