ನಂದಿನಿ ಮೈಸೂರು
*ಶಾರುಖ್ ಡಂಕಿಯಲ್ಲಿ ಕುಸ್ತಿ ಸೀನ್…ಜವಾನ್ ನೆನಪಿಸಿಕೊಂಡಿದ್ದೇಕೆ ಫ್ಯಾನ್ಸ್…?*
ಡಂಕಿ ಸಿನಿಮಾದ ಕ್ರೇಜ್ ಜೋರಾಗಿದೆ. ಟೀಸರ್ ಧೂಳ್ ಎಬ್ಬಿಸಿದೆ. ಡಂಕಿ ಡ್ರಾಪ್ 1 ಬಳಿಕ ಬಂದ ಡಂಕಿ ಡ್ರಾಪ್ 2 ಅಂದರೆ ಲುಟ್ ಪುಟ್ ಗಯಾ ಎಂಬ ಮೆಲೋಡಿ ಹಾಡು ಎಲ್ಲರ ಗಮನಸೆಳೆದಿದೆ. ಶಾರುಖ್ ಖಾನ್ ಹಾಗೂ ತಾಪ್ಸಿ ಪನ್ನು ನಡುವಿನ ಪ್ರೇಮಗೀತೆ ಹಿಟ್ ಲೀಸ್ಟ್ ಸೇರಿದೆ. ಇದೀಗ ಈ ಹಾಡಿನ ಒಂದು ಸೀನ್ ಎಲ್ಲೆಡೆ ವೈರಲ್ ಆಗ್ತಿದ್ದು, ಕಿಂಗ್ ಖಾನ್ ಫ್ಯಾನ್ಸ್ ಹುಬ್ಬೇರಿಸಿದ್ದಾರೆ.
ಡಂಕಿ ಸಿನಿಮಾದ ಲುಟ್ ಪುಟ್ ಗಯಾ ಸಿಂಗಿಂಗ್ ನಂಬರ್ ನಲ್ಲಿ ಕುಸ್ತಿ ಅಖಾಡದಲ್ಲಿ ತಾಪ್ಸಿ ಶಾರುಖ್ ಎತ್ತಿ ಹಾಕುವ ದೃಶ್ಯವಿದೆ. ಅದೇ ರೀತಿ ಜವಾನ್ ಸಿನಿಮಾದ ಹಾಡಿನಲ್ಲಿ ದೀಪಿಕಾ ಶಾರುಖ್ ರನ್ನು ಎತ್ತಿ ಕುಸ್ತಿ ಆಡುತ್ತಾರೆ. ಈ ಎರಡು ಸೀನ್ಸ್ ನೋಡಿ ಫ್ಯಾನ್ಸ್ ಕಿಂಗ್ ಖಾನ್ ಕುಸ್ತಿ ಹಿಂದೆ ಬಿದ್ದಿದ್ಯಾಕೆ ಎಂದು ಚರ್ಚೆ ನಡೆಸುತ್ತಿದ್ದಾರೆ.
‘ಡಂಕಿ’ ರಾಜ್‌ಕುಮಾರ್ ಹಿರಾನಿ ಬತ್ತಳಿಕೆಯಿಂದ ಬರುತ್ತಿರೋ ಮತ್ತೊಂದು ವಿಶಿಷ್ಠ ಸಿನಿಮಾ. ಭಾರತದ ಪಂಜಾಬ್ ಹಾಗೂ ಸುತ್ತಮುತ್ತಲಿನ ಪ್ರದೇಶದಿಂದ ಕಾನೂನು ಬಾಹಿರವಾಗಿ ಕೆನಡಾ ಹಾಗೂ ಅಮೆರಿಕಕ್ಕೆ ತೆರಳುವವರನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ಮಾಡಲಾಗಿದೆ. ವಿದೇಶ, ಪ್ರೀತಿ, ಸ್ನೇಹ, ತಾಯ್ನಾಡು ಇಂತಹದ್ದೇ ಎಳೆಯನ್ನಿಟ್ಟುಕೊಂಡು ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ‘ಡಂಕಿ’ಗೆ ಕಥೆ ಹೆಣೆದಿದ್ದಾರೆ.
‘ಡಂಕಿ’ ಸಿನಿಮಾವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್ಮೆಂಟ್ ಹಾಗೂ ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್‌ನಿಂದ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸುತ್ತಿದ್ದಾರೆ. ಮುಂದಿನ ತಿಂಗಳು ಡಿಸೆಂಬರ್ 22ಕ್ಕೆ ‘ಡಂಕಿ’ ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.