ಸ್ವಚ್ಛತಾ ಹಿ ಸೇವಾ” ಆಂದೋಲನ ಅಂಗವಾಗಿ ಹೆಚ್.ಡಿ.ಕೋಟೆ ತಾ.ಪಂ ಆವರಣದಲ್ಲಿ ಶ್ರಮದಾನ

ನಂದಿನಿ ಮೈಸೂರು

ಸ್ವಚ್ಛತಾ ಹಿ ಸೇವಾ” ಆಂದೋಲನ ಅಂಗವಾಗಿ ಹೆಚ್.ಡಿ.ಕೋಟೆ ತಾ.ಪಂ ಆವರಣದಲ್ಲಿ ಶ್ರಮದಾನ

ಹೆಚ್.ಡಿ.ಕೋಟೆ : ‘ಸ್ವಚ್ಛತಾ ಹಿ ಸೇವಾ’ ಎಂಬ ವಿಶೇಷ ಜನಾಂದೋಲನ ಅಂಗವಾಗಿ ಮಾನ್ಯ ಮಖ್ಯಕಾರ್ಯನಿರ್ವಾಹಕ ಅಧಿಕಾರಿ ರವರ ನಿರ್ದೇಶನದಂತೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ರವರ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಇಂದು ಶ್ರಮದಾನ ಮೂಲಕ ಸ್ವಚ್ಛತಾ ಕಾರ್ಯ ಮಾಡಲಾಯಿತು.

ತಾಲೂಕು ಪಂಚಾಯಿತಿ ಆವರಣದಲ್ಲಿ ಶನಿವಾರ ಸ್ವಚ್ಛತಾ ಹಿ ಸೇವಾ ಕಾರ್ಯ ಬಳಿಕ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಧರಣೇಶ್ ಅವರು ಮಾತನಾಡಿ, ಅಕ್ಟೋಬರ್‌ 2 ರಂದು ಮಹಾತ್ಮಾಗಾಂಧೀಜಿ ಜನ್ಮದಿನದ ಸ್ಮರಣಾರ್ಥವಾಗಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಹಾತ್ಮರ ಧ್ಯೆಯವಾಕ್ಯ ‘ಸ್ವಚ್ಛತೆಯೇ ದೈವತ್ವ’ ಎಂಬ ಕನಸನ್ನು ನನಸಾಗಿಸಲು ಸೆ.15 ರಿಂದ ಅ.2 ರವರೆಗೆ 15 ದಿನಗಳ ಕಾಲ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ವರ್ಷದ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನದ ಘೋಷವಾಕ್ಯವಾಗಿ ‘ಕಸಮುಕ್ತ, ತ್ಯಾಜ್ಯಮುಕ್ತ ಭಾರತ’ ಎಂದು ಘೋಷಿಸಲಾಗಿದ್ದು, ಎಲ್ಲೆಡೆ ಸದೃಶ್ಯ ಸ್ವಚ್ಛತೆ ಸಾಧಿಸಿ, ಸ್ವಚ್ಛ ಸುಂದರ, ಸಧೃಢ ಗ್ರಾಮಗಳನ್ನು ರೂಪಿಸುವ ಮಹತ್ವಾಕಾಂಕ್ಷಿ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಗ್ರಾಮಗಳ ಸ್ವಚ್ಛತೆಗೆ ಸ್ವಯಂ ಪ್ರೇರಿತರಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸುವುದು. ಗ್ರಾ.ಪಂ ವ್ಯಾಪ್ತಿಗಳಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ನದಿ ತೀರ, ಸಾಂಸ್ಥಿಕ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿಗಳು, ಸರ್ಕಾರಿ ಶಾಲೆ, ಅಂಗನವಾಡಿ ಮತ್ತು ನಾಲಾಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮತ್ತು ಸದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಮತ್ತು ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಪಿಡಿಓಗಳಿ ತಿಳಿಸಿದರು.

ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆಯನ್ನು ಉತ್ತಮವಾಗಿ ಯಶಸ್ವಿಗೊಳಿಸಲು ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರ ಶ್ರಮ ಅಗತ್ಯವಿದೆ ಎಂದು ಇದೇ ವೇಳೆ ಹೇಳಿದರು .

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ರಂಗಸ್ವಾಮಿ, ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಾದ ರಘುನಾಥ್, ವ್ಯವಸ್ಥಾಕರಾದ ಹನುಮಂತರಾಜು, ಪಿಡಿಓಗಳು ಹಾಗೂ ತಾಲೂಕಿ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *