ನಂದಿನಿ ಮೈಸೂರು
ದಕ್ಷಿಣಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು ಜಿಲ್ಲಾಡಳಿತ ನಂಜನಗೂಡು ತಾಲೂಕು ಸಮಗ್ರ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ದಕ್ಷಿಣಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಇದೇ ಸಂದರ್ಭದಲ್ಲಿ ನಂಜನಗೂಡು ವಿಧಾನ ಸಭಾ ಕ್ಷೇತ್ರದ ಶಾಸಕ ಹರ್ಷವರ್ದನ್,ಗೋವಿಂದ ಕಾರಜೋಳ, ನಿರಂಜನ್ ಮೂರ್ತಿ,ಜಿಲ್ಲಾಧಿಕಾರಿ ರಾಜೇಂದ್ರ,ಎಸ್ಪಿ ಆರ್.ಚೇತನ್ ಸೇರಿದಂತೆ ಅಧಿಕಾರಿಗಳು ಜೊತೆಗಿದ್ದರು.