ನಂದಿನಿ ಮೈಸೂರು
ಸಿದ್ದು ಸಿಎಂ ಮಾಕನ ಹುಂಡಿ ಗ್ರಾಮದಲ್ಲಿ ಗ್ರಾಮಸ್ಥರಿಂದ ಸಿಹಿ ಹಂಚಿ ಸಂಭ್ರಮಾಚರಣೆ
ತಾಂಡವಪುರ ಮೇ 23:- ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ವರುಣ ಕ್ಷೇತ್ರಕ್ಕೆ ಸೇರುವ ಮೈಸೂರು ತಾಲೂಕು ಮಾಕನಹುಂಡಿ ಗ್ರಾಮದಲ್ಲಿ ಗ್ರಾಮದ ಕಾಂಗ್ರೆಸ್ ಮುಖಂಡರಾದ ರವಿ ಎಸ್ ಚಂದ್ರ ರವರ ನೇತೃತ್ವದಲ್ಲಿ ಗ್ರಾಮಸ್ಥರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಸಿದ್ದರಾಮಯ್ಯನವರು ವರುಣ ಕ್ಷೇತ್ರದಲ್ಲಿ ಗೆದ್ದು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗುತ್ತಿರುವುದು ಇಡೀ ವರುಣ ಕ್ಷೇತ್ರಕ್ಕೆ ಅಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದ್ದು ಈ ನಿಟ್ಟಿನಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಹಿನ್ನೆಲೆಯಲ್ಲಿ ಗ್ರಾಮದ ಪ್ರತಿ ಮನೆಮನೆಗೂ ಸಿಹಿ ಹಂಚಲಾಯಿತು ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಿ ರವಿ ,ಎಸ್ ಚಂದ್ರು, ಶಿವು, ಮಹದೇವು, ಹೊನ್ನಪ್ಪ ಕುಮಾರ, ಪವನ್ ,ಚಂದು ಸೇರಿದಂತೆ ಮುಂತಾದವರು ಹಾಜರಿದ್ದರು.