ಸಿದ್ದರಾಮಯ್ಯ ಎಂಬ ಹೆಸರಿನ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದೇನೆ

ನಂದಿನಿ ಮೈಸೂರು

2023 ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರಿನಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಿದ್ದರಾಮಯ್ಯರವರು 24 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಸಿದ್ದರಾಮಯ್ಯ ನಂತರ ಉಪಮುಖ್ಯಮಂತ್ರಿಯಾಗಿ
ಡಿ‌.ಕೆ.ಶಿವಕುಮಾರ್ ಅವರು ಗಂಗಾಧರ ಅಜ್ಜಯ್ಯರವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ತದನಂತರ ಸಂಪುಟ ಸಚಿವರಾಗಿ ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆ.ಹೆಚ್.ಮುನಿಯಪ್ಪ, ರಾಮಲಿಂಗ ರೆಡ್ಡಿ, ಕೆ.ಜೆ‌‌‌.ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಪ್ರಮಾಣವಚನ ಸ್ವೀಕರಿಸಿದವರಿಗೆಲ್ಲ ರಾಜ್ಯಪಾಲರು ಹೂಗುಚ್ಚ ನೀಡಿ ಶುಭಕೋರಿದರು.

ಈ ಕಾರ್ಯಕ್ರಮಕ್ಕೆ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಲಕ್ಷಾಂತರ ಕಾರ್ಯಕರ್ತರು,ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ.

Leave a Reply

Your email address will not be published. Required fields are marked *